ವಿಜಯನಗರ

ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ’: ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ವಿಜಯೇಂದ್ರ ವ್ಯಂಗ್ಯ

vijayendra talksabout bus ticket hike

ಬೆಂಗಳೂರು: ರಾಜ್ಯದ ಜನರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಎಂಟಿಸಿ (BMTC), ಕೆಎಸ್‌‌ಆರ್‌ಟಿಸಿ (KSRTC) ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ (Govt Bus) ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ (State Govt) ಮುಂದಾಗಿದೆ. ಇಂದು (ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶೇ 15 ರಷ್ಟು ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಗಾಯದ ಮೇಲೆ ಬರೆ ಎಳೆದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಗಾಯದ ಮೇಲೆ ಬರೆ ಎಂಬಂತೆ ಒಂದೆಡೆ ಮಹಿಳೆಯರಿಗೆ ಶಕ್ತಿ ಯೋಜನೆಯ ಹೆಸರನಿನಲ್ಲಿ ಉಚಿತ ಬಸ್ ಪ್ರಯಾಣ ಒದಗಿಸಲಾಗಿದೆ. ಇನ್ನೊಂದೆಡೆ ಪುರುಷರ ಜೇಬಿಗೆ ಕತ್ತರಿ ಹಾಕುವುದಕ್ಕೂ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ರೀತಿಯ ಸರ್ಕಾರಿ ಬಸ್‌‌ಗಳ ದರವನ್ನು ಶೇ 15 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ವಿಜಯೇಂದ್ರ ಸರ್ಕಾರದ ವಿರುದ್ಧ ಹೋರಾಟ ಎಚ್ಚರಿಕೆ ನೀಡಿದ್ದಾರೆ.

ಎಕ್ಸ್ ಪೋಸ್ಟ್ ಮೂಲಕ ಕಿಡಿಕಾರಿದ ವಿಜಯೇಂದ್ರ

ಎಕ್ಸ್ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿರುವ ಬಿವೈ ವಿಜಯೇಂದ್ರ ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ.? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು, ಸಾರಿಗೆ ಸಂಸ್ಥೆ ನಷ್ಟದ ಹಾದಿ ತುಳಿಯಲು ಕಾರಣರಾಗಿದ್ದೀರಿ. ಮಹಿಳೆಯರಿಗೆ ಉಚಿತ ಪ್ರಯಾಣ ಪುರುಷರಿಗೆ ಅದರ ಹೊರೆ ಖಚಿತ ಎಂದು ವ್ಯಂಗ್ಯವಾಡಿದ್ದಾರೆ.

ಇದೀಗ ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ, ವಾಣಿಜ್ಯ ಉತ್ಪನ್ನಗಳ ಮಾರಾಟ ಆಕರ್ಷಣೆಗೆ ಮಳಿಗೆಗಳಲ್ಲಿ Buy-1 Get-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ. ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ಧ್ವನಿ ಎತ್ತಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

You may also like

ram charan gamechanger is set to release
ವಿಜಯನಗರ

ಗೇಮ್ ಚೇಂಜರ್’ ಬೆನಿಫಿಟ್ ಶೋಗಳಿಗೆ ಸಿಕ್ತು ಗ್ರೀನ್ ಸಿಗ್ನಲ್, ರಾಮ್​ ಚರಣ್ ಟಿಕೆಟ್ ಬೆಲೆ ಕೂಡ ಏರಿಕೆ!

ಟಾಲಿವುಡ್ (Tollywood) ನಟ, ಮೆಗಾ ಹೀರೋ ರಾಮ್ ಚರಣ್ (Ram Charan) ಅಭಿನಯದ ಗೇಮ್​ ಚೇಂಜರ್​ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೆ