ರಾಜ್ಯ ಸರ್ಕಾರವು ಬ್ರಾಹ್ಮಣ (Brahmin) ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಿದೆ. ಕರ್ನಾಟಕ (Karnataka) ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ (State Government) ತಿಳಿಸಿದೆ.
ಎಕ್ಸ್ನಲ್ಲಿ ಸಿದ್ದರಾಮಯ್ಯ ಮಾಹಿತಿ
ಶಿಷ್ಯವೇತನ ಬಿಡುಗಡೆ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ಒಟ್ಟು 4474 ಅರ್ಜಿಗಳು ಸಲ್ಲಿಕೆ
ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರವನ್ನು ಸರ್ಕಾರ ಹಂಚಿಕೊಂಡಿದೆ. 2023-24 ನೇ ಸಾಲಿನಲ್ಲಿ ಒಟ್ಟು 4474 ಅರ್ಜಿಗಳು ಸಲ್ಲಿಕೆಯಾಗಿದ್ದು, ಶಿಷ್ಯವೇತನ ಪಾವತಿಸ ಬಹುದಾದ ಅರ್ಹ ಅರ್ಜಿಗಳ ಸಂಖ್ಯೆ 3958 ಎಂದು ತಿಳಿಸಿದೆ.