BJP: ನಾಳೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆ
ನವದೆಹಲಿ: ಬಿಜೆಪಿಯ (BJP) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ನಾಳೆ ಅಧ್ಯಕ್ಷರ ಹೆಸರನ್ನ ಬಹಿರಂಗಪಡಿಸಲಾಗುತ್ತದೆ ಎನ್ನಲಾಗಿದೆ. ಅತಿಹೆಚ್ಚು ಬೆಂಬಲ ಪಡೆದ ನಿತಿನ್ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್ (46) ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದೆ. ಇದರಿಂದಾಗಿ ಅವರು ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಈ ನಾಮಪತ್ರಗಳ ಪೈಕಿ 36 ನಾಮಪತ್ರಗಳು ವಿವಿಧ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸಲ್ಲಿಕೆಯಾಗಿದ್ದರೆ, ಒಂದು ನಾಮಪತ್ರವನ್ನು ಬಿಜೆಪಿ ರಾಷ್ಟ್ರೀಯ…
