Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…
