LPG: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ
ನವದೆಹಲಿ: ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮನೆಗಳಿಗೆ ನಿರಂತರ ಗ್ಯಾಸ್ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೂ , LPG ಸರಬರಾಜುಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ದೆಹಲಿಯಲ್ಲಿಂದು ಹೇಳಿದರು. ವದಂತಿಗಳನ್ನು ನಂಬಬೇಡಿ ಸುದ್ದಿಗೋಷ್ಠಿಯಲ್ಲಿ ಅವರು, LPG ಗೆ ಸಂಬಂಧಿಸಿದಂತೆ ವದಂತಿಗಳನ್ನು ನಂಬಬೇಡಿ ಎಂದು , ಜನರಲ್ಲಿ ಮನವಿ ಮಾಡಿಕೊಂಡರು….
