Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ
ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್ ವಾಪಾಸ್ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….
