TOP NEWS
d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
actress Ashu Reddy 9 crores fraud case

Ashu Reddy: ಮದುವೆ ಹೆಸರಲ್ಲಿ ಉದ್ಯಮಿಗೆ 9 ಕೋಟಿ ವಂಚಿಸಿದ ನಟಿ

ಹೈದರಾಬಾದ್‌: ತೆಲುಗು ಚಿತ್ರರಂಗದ ನಟಿ ಮತ್ತು ಸಾಮಾಜಿಕ ಜಾಲತಾಣದ ತಾರೆ ಅಶು ರೆಡ್ಡಿ(Ashu Reddy) ಅವರು 9 ಕೋಟಿ ರೂಪಾಯಿಗೂ ಅಧಿಕ ಹಣದ ವಂಚನೆ ಪ್ರಕರಣದಲ್ಲಿ ಸುದ್ದಿಯಾಗಿದ್ದಾರೆ. ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್ (CCS) ಪೊಲೀಸರು ನಟಿ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಲಂಡನ್‌ನಲ್ಲಿ ನೆಲೆಸಿರುವ ಸಾಫ್ಟ್‌ವೇರ್ ಎಂಜಿನಿಯರ್ ಯುವಿ ಧರ್ಮೇಂದ್ರ ಅವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿತ್ತು. ಏನಿದು ಪ್ರಕರಣ? ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ,…

Read More
Tumkuru sports competition here is the details

Tumkuru: 24ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ತುಮಕೂರು: ತುಮಕೂರಿನಲ್ಲಿ (Tumkuru) ನಡೆಯುತ್ತಿರುವ 24ನೇ ರಾಷ್ಟ್ರೀಯ ಕಿರಿಯರ (20 ವಯೋಮಿತಿ) ಅಥ್ಲೆಟಿಕ್ಸ್ ಕ್ರೀಡಾಕೂಟದ ಪುರುಷ ಹಾಗೂ ಮಹಿಳೆಯ 100 ಮೀಟರ್ ವಿಭಾಗದಲ್ಲಿ ಅಭಯ್ ಸಿಂಗ್ ಮತ್ತು ನಿಪಮ್ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ತುಮಕೂರು ಜಿಲ್ಲಾಡಳಿತ ಮತ್ತು ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಶುಕ್ರವಾರ ಜೂನಿಯರ್ ಪುರುಷರ 100 ಮೀಟರ್ ವಿಭಾಗದಲ್ಲಿ 10.41 ಸೆಕೆಂಡ್ನಲ್ಲಿ ಕ್ರಮಿಸಿದ ಅಭಯ್ ಸಿಂಗ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಯುವರಾಜ್…

Read More
Heavy rain in Shivamogga district siganduru and other place

HEAVY RAIN: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಿಂಚನ, ಸಿಗಂಧೂರು ಭಾಗದಲ್ಲಿ ವರುಣನ ಆರ್ಭಟ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಮತ್ತು ಸುತ್ತಮುತ್ತಲಿನ ಗುಮ್ಮಗೋಡು (Heavy Rain) ಪ್ರದೇಶಗಳಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಧಾರಾಕಾರ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿಂದ ಜನರಿಗೆ ತಂಪಾಗಿದೆ. ವಾತಾವರಣದಲ್ಲಿ ಬದಲಾವಣೆ ಕಳೆದ ಹಲವು ದಿನಗಳಿಂದ ಕಾದ ಕಾವಲಿಯಂತಿದ್ದ ಈ ಭಾಗದಲ್ಲಿ, ಸಂಜೆಯ ವೇಳೆಗೆ ವರುಣ ದೇವ ಕೃಪೆ ತೋರಿದ್ದಾನೆ. ಭೋರ್ಗರೆದ ಮಳೆಯಿಂದಾಗಿ ವಾತಾವರಣ ಸಂಪೂರ್ಣವಾಗಿ ತಂಪಾಗಿದ್ದು, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಇದರಿಂದ ಸ್ಥಳೀಯರು ಮತ್ತು ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ತಿಯಾದ ಬಿಸಿಲಿಗೆ…

Read More
Shocking allegation on Mysuru private drm hospital

Shocking: ಚಿಕಿತ್ಸೆ ನೆಪದಲ್ಲಿ 7 ಲಕ್ಷ ವಸೂಲಿ, ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಗಂಭೀರ ಆರೋಪ

ಮೈಸೂರು: ಚೆಲುವಾಂಬ ಆಸ್ಪತ್ರೆಯ ಪ್ರಕರಣದ ಬೆನ್ನಲ್ಲೇ, ಇದೀಗ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ (Shocking) ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಣದ ಲೂಟಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಕುಲಂ ಪ್ರದೇಶದಲ್ಲಿರುವ ಡಿಆರ್‌ಎಂ (DRM) ಆಸ್ಪತ್ರೆಯಲ್ಲಿ 45 ದಿನಗಳ ಕಾಲ ಚಿಕಿತ್ಸೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು, ಕೊನೆಗೆ ಮಗು ಮೃತಪಟ್ಟಿದೆ ಎಂದು ತಿಳಿಸಿರುವ ಆಸ್ಪತ್ರೆಯ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ: ಕೆಆರ್‌ಎಸ್ ಮೂಲದ ದಯಾನಂದ ಮತ್ತು ದಿವ್ಯಾ ದಂಪತಿಗಳ ಮಗು 7 ತಿಂಗಳಿಗೆ…

Read More
MM Naravane talks about his controversial book

MM Naravane: ಭಾರತೀಯ ಸೇನೆಯ ರೋಚಕ ಕಥೆಗಳನ್ನು ತೆರೆದಿಟ್ಟ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ

ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ (MM Naravane) ಅವರು ತಮ್ಮ ಬರವಣಿಗೆಯ ಮೂಲಕ ಸೇನೆಯ ಅಪರೂಪದ ಹಾಗೂ ರೋಚಕ ಕಥೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸುತ್ತಿದ್ದಾರೆ. ಇತ್ತೀಚೆಗೆ ಅವರು ‘ದಿ ಕ್ಯೂರಿಯಸ್ ಅಂಡ್ ದಿ ಕ್ಲಾಸಿಫೈಡ್: ಅನ್ಅರ್ಥಿಂಗ್ ಮಿಲಿಟರಿ ಮೈಥ್ಸ್ ಅಂಡ್ ಮಿಸ್ಟರೀಸ್’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಸೇನಾ ಪಡೆಗಳ ಇತಿಹಾಸ, ಸಂಪ್ರದಾಯಗಳು ಮತ್ತು ಅಚ್ಚರಿಯ ಘಟನೆಗಳನ್ನು ಅವರು ಕಥಾ ರೂಪದಲ್ಲಿ ವಿವರಿಸಿದ್ದಾರೆ. ತಮ್ಮ ಮೊದಲ ಪುಸ್ತಕ ‘ಫೋರ್ ಸ್ಟಾರ್ಸ್…

Read More
karnataka high xloses ranveer singh kantara case

Ranveer Singh: ಕಾಂತಾರ ದೈವದ ಕುರಿತು ಅವಹೇಳನಕಾರಿ ಹೇಳಿಕೆ, ಹೈಕೋರ್ಟ್‌ನಲ್ಲಿ ಬೇಷರತ್ ಕ್ಷಮೆ ಕೋರಿದ ನಟ ರಣವೀರ್ ಸಿಂಗ್

ಬೆಂಗೂಳೂರು: ಕಳೆದ ವರ್ಷ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವವೊಂದರಲ್ಲಿ ‘ಕಾಂತಾರ: ಚಾಪ್ಟರ್-1’ ಚಿತ್ರದ ದೈವಪಾತ್ರವನ್ನು ಅಣಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರು ಕರ್ನಾಟಕ ಹೈಕೋರ್ಟ್‌ಗೆ ನೂತನ ಪ್ರಮಾಣಪತ್ರವನ್ನು ಸಲ್ಲಿಸಿ ಬೇಷರತ್ ಕ್ಷಮೆ ಕೋರಿದ್ದಾರೆ. ಶನಿವಾರ ನಡೆದ ವಿಚಾರಣೆ ವೇಳೆ, ನಟನ ಪರ ವಕೀಲರು ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಅದರಲ್ಲಿ ರಣವೀರ್ ಸಿಂಗ್ ಅವರು ದೇವಸ್ಥಾನಕ್ಕೆ ಭೇಟಿ ನೀಡುವ ಭರವಸೆ ನೀಡಿರುವುದನ್ನು ನ್ಯಾಯಪೀಠದ ಗಮನಕ್ಕೆ ತಂದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಾಲಯ ನ್ಯಾಯಮೂರ್ತಿ…

Read More