CBSE: ಸಿಬಿಎಸ್‌ಇ ಆನ್-ಸ್ಕ್ರೀನ್ ಮೌಲ್ಯಮಾಪನ ಗೊಂದಲ: ತಾಂತ್ರಿಕ ದೋಷ ನಿವಾರಣೆಗೆ ಐಐಟಿ ತಜ್ಞರ ನೆರವು
ನವದೆಹಲಿ: ಸಿಬಿಎಸ್‌ಇ (CBSE) ಜಾರಿಗೆ ತಂದಿರುವ ಹೊಸ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಡಿಜಿಟಲ್ ಮೌಲ್ಯಮಾಪನ ಪದ್ಧತಿಯ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೊನೆಗೂ ಈ ವಿವಾದದ ಕುರಿತು ಮೌನ ಮುರಿದಿದ್ದಾರೆ. ಈ ಇಡೀ ಗೊಂದಲದ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿರುವ ಅವರು, ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಲೋಪದೋಷಗಳು ಕಂಡುಬಂದಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು…
