TOP NEWS
cm siddaramaiah caste census report master stroke

CM Siddaramaiah: ರಾಜೀನಾಮೆ ಕೌಂಟ್‌ಡೌನ್ ನಡುವೆ ಸಿಎಂ ಸಿದ್ದರಾಮಯ್ಯ ‘ಜಾತಿ ಗಣತಿ’ ಬ್ರಹ್ಮಾಸ್ತ್ರ

ಬೆಂಗಳೂರು: ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡ ಬೆನ್ನಲ್ಲೇ, ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಕೊನೆಯ ಕ್ಷಣದಲ್ಲಿ ‘ಜಾತಿ ಗಣತಿ’ ಎಂಬ ಪ್ರಬಲ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಜಾತಿ ಗಣತಿಯ ಮರು ಸಮೀಕ್ಷಾ ವರದಿಯು ಇಂದೇ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿರುವುದು, ಸದ್ಯದ ರಾಜಕೀಯ ಚಿತ್ರಣವನ್ನೇ ಬದಲಾಯಿಸುವ ದಟ್ಟ ಮುನ್ಸೂಚನೆ ನೀಡಿದೆ. ಇಂದು ನಡೆಯುತ್ತಿದೆ ಉನ್ನತ ಮಟ್ಟದ ಸಭೆ…

Read More
dharwad yogesh gowda case cbi opposed tingrikar bail plea

Yogesh Gowda: ಯೋಗೀಶ್ ಗೌಡ ಕೊಲೆ ಕೇಸ್: ಇನ್ಸ್‌ಪೆಕ್ಟರ್ ಟಿಂಗರಿಕರ್ ಸಾಕ್ಷ್ಯ ನಾಶದ ವಿರುದ್ಧ ಸಿಬಿಐ ಭೀಕರ ವಾದ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ (Yogesh Gowda) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೊಲೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ದೋಷಿಗಳಿಗೆ ನ್ಯಾಯಾಲಯವು ಜೀವಾವಧಿ ಜೈಲು ಶಿಕ್ಷೆ ಹಾಗೂ ತಲಾ 30 ಸಾವಿರ ರೂಪಾಯಿ ದಂಡ ವಿಧಿಸಿದೆ….

Read More
kpcc president and dcm dk shivakumar big action

DK Shivakumar: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಆಕ್ಷನ್: ಸಭೆಗೆ ಗೈರಾದ ನಾಯಕರು ಪಕ್ಷದ ಹುದ್ದೆಗಳಿಂದ ವಜಾ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಭಾರಿ ಆಕ್ಷನ್ ತೆಗೆದುಕೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಾದ ಅತ್ಯಂತ ಪ್ರಮುಖ ಸಭೆಗೆ ಗೈರುಹಾಜರಾದ ಕೆಪಿಸಿಸಿ ಪದಾಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಇಬ್ಬರು ಪ್ರಮುಖ ವಕ್ತಾರರು ಸೇರಿದಂತೆ ಹಲವು ಹಿರಿಯ ನಾಯಕರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಹುದ್ದೆಗಳಿಂದ ವಜಾಗೊಳಿಸಲಾಗಿದೆ. ಯಾರಿಗೆಲ್ಲಾ ಗೇಟ್‌ಪಾಸ್‌? ಪಕ್ಷದ ಅತ್ಯಂತ ಪ್ರಮುಖ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ…

Read More
Cm siddaramaiah tweets about government developmental work

CM Siddaramaiah: ರಾಜೀನಾಮೆ ವದಂತಿ ಬೆನ್ನಲ್ಲೇ ಆಡಳಿತದ 3 ವರ್ಷದ ಸಾಧನೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆಯೇ ಎಂಬ ಹೊಸ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. ಏನಿದೆ ಸಿಎಂ ಟ್ವಿಟ್‌ನಲ್ಲಿ? ರಾಜ್ಯದ ಜನರ…

Read More
America-Iran Pakistan As Mediator in can be problematic

America-Iran: ಅಮೆರಿಕ-ಇರಾನ್ ಸಂಧಾನಕ್ಕೆ ಪಾಕ್ ಮಧ್ಯಸ್ಥಿಕೆ: ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯುಎಸ್ ಸೆನೆಟರ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ (America-Iran) ನಡುವೆ ಕದನ ವಿರಾಮ ಏರ್ಪಡಿಸುವ ಮಾತುಕತೆಯಲ್ಲಿ ಪಾಕಿಸ್ತಾನವು ಸಂಧಾನಕಾರನ ಪಾತ್ರ ವಹಿಸುತ್ತಿರುವುದಕ್ಕೆ ಅಮೆರಿಕದ ಪ್ರಭಾವಿ ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮಧ್ಯಸ್ಥಿಕೆ ವಹಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ ಎಂದು ಕಿಡಿಕಾರಿರುವ ಅವರು, ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಸಂಬಂಧ ವೃದ್ಧಿಸುವ ‘ಅಬ್ರಹಾಂ ಒಪ್ಪಂದ’ಕ್ಕೆ (Abraham Accords) ಸೇರುವ ಕುರಿತು ಇಸ್ಲಾಮಾಬಾದ್ ತನ್ನ ನಿಲುವನ್ನು ತಕ್ಷಣವೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’…

Read More
Air India Delhi San Francisco Flight technical issue safely landed

AIR INDIA: ಭಿನ್ನ ಸ್ಥಳಗಳಲ್ಲಿ ವಿಮಾನ ತಾಂತ್ರಿಕ ದೋಷ:‌ ಪ್ರಯಾಣಿಕರು ಸೇಫ್

ನವದೆಹಲಿ/ಬೆಂಗಳೂರು: ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ತಾಂತ್ರಿಕ ದೋಷದ (Air India) ಕಾರಣದಿಂದಾಗಿ ಎರಡು ಪ್ರತ್ಯೇಕ ಆತಂಕಕಾರಿ ಘಟನೆಗಳು ಸಂಭವಿಸಿದ್ದು, ಪೈಲಟ್‌ಗಳು ಮತ್ತು ಸಿಬ್ಬಂದಿಯ ಸಮಯಪ್ರಜ್ಞೆಯಿಂದ ನೂರಾರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎಂಟು ಗಂಟೆಗಳ ಕಾಲ ಗಗನದಲ್ಲೇ ಹಾರಾಡಿ ದೆಹಲಿಗೆ ಮರಳಿದ ಅಂತರರಾಷ್ಟ್ರೀಯ ವಿಮಾನ! ರಾಜಧಾನಿ ದೆಹಲಿಯಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ಸಂಸ್ಥೆಯ ‘AI173’ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮೇ 27 ರಂದು ಟೇಕ್‌ಆಫ್ ಆಗಿದ್ದ…

Read More
Sdpi protest in Mysuru by opposing government decision to take back case against Pramod mutalik and Chaitra kundapur

SDPI: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ

ಮೈಸೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕೈಗೊಂಡಿರುವ ನಿರ್ಧಾರವು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ನ್ಯಾಯದ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ ಎಂದು ಎಸ್‌ಡಿಪಿಐ (SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತೀವ್ರ…

Read More