Namma Metro: ಹಳಿಗೆ ಜಿಗಿದು ಆತ್ಮಹತ್ಯೆ ತಡೆಗೆ ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ!
ಬೆಂಗಳೂರು: ರಾಜಧಾನಿಯ ಸಂಚಾರದ ಹೆಮ್ಮೆಯ ಸಂಕೇತವಾಗಿರುವ ‘ನಮ್ಮ ಮೆಟ್ರೋ’ (Namma Metro) ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಳಿಗಳ ಮೇಲೆ ಜಿಗಿದು ಪ್ರಾಣ ಕಳೆದುಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸುವ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಇಂತಹ ದುರ್ಘಟನೆಗಳಿಂದಾಗಿ ಅಮೂಲ್ಯ ಜೀವಗಳು ನಷ್ಟವಾಗುವುದರ ಜೊತೆಗೆ, ಲಕ್ಷಾಂತರ ನಿತ್ಯ ಪ್ರಯಾಣಿಕರ ಸಂಚಾರ ವ್ಯವಸ್ಥೆಯೂ ಗಂಟೆಗಟ್ಟಲೆ ಸ್ಥಗಿತಗೊಂಡು ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ನಿರ್ಧರಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಪ್ರಯಾಣಿಕರ ಸುರಕ್ಷತೆ ಕಾಯ್ದುಕೊಳ್ಳಲು…
