Supreme Court: ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಸ್ಪಷ್ಟವಾಗಿ ನಿರಾಕರಿಸಿದೆ. “ನಿಮ್ಮ ಸಮಯ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಶೀರ್ಷಪೀಠವು ಅರ್ಜಿದಾರರ ಪರ ವಕೀಲರಿಗೆ ನೇರವಾಗಿ ಹೇಳಿದೆ. ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಡೆಸಿದ ಆನ್‌ಲೈನ್ ಕರೆಗೆ ಓಗೊಟ್ಟು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…
