Ram Mandir: ಶ್ರೀರಾಮ ಮಂದಿರದ ಕಾಣಿಕೆ ಎಣಿಕೆಯಲ್ಲೇ ವಂಚನೆ, ಎಸ್‌ಐಟಿ ಮರುರಚನೆಗೆ ಸುಪ್ರೀಂ ಆದೇಶ
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ದೇಣಿಗೆ ಹಣ ಕಳ್ಳತನವಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್ರಚಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಅತ್ಯಂತ ಸೂಕ್ಷ್ಮ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬೇಡಿ ಎಂದು ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಸರ್ವೋಚ್ಚ ನ್ಯಾಯಾಲಯ, ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ತನ್ನ…
