Priyank Kharge: ಒಬ್ಬ ಬಿಜೆಪಿ ನಾಯಕನ ಮಗನಾದ್ರೂ ಆರ್‌ಎಸ್‌ಎಸ್ ಫುಲ್ ಟೈಮ್ ಪ್ರಚಾರಕನಾಗಿದ್ದಾನಾ?: ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ
ಬೆಂಗಳೂರು: ಬಿಜೆಪಿ ನಾಯಕರ ಮಕ್ಕಳು ಆರ್‌ಎಸ್‌ಎಸ್‌ನಲ್ಲಿ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡುತ್ತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾದವರಿಗೆ ಸಂಘ ಪರಿವಾರದವರು ನೆರವು ನೀಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ತಾವೂ ಮೊದಲಿನಿಂದಲೂ ಇದೇ ಮಾತನ್ನು ಹೇಳುತ್ತಿರುವುದಾಗಿ ನೆನಪಿಸಿದರು. ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಯ ಹೆಸರಿನಲ್ಲಿ ಬಡವರ ಮಕ್ಕಳನ್ನು ಮಾತ್ರ ಮುಂಚೂಣಿಗೆ ಬಿಡಲಾಗುತ್ತಿದೆ ಎಂದು ಅವರು ಆಕ್ರೋಶ…
