High Court: ಸಾರ್ವಜನಿಕ ಶೌಚಾಲಯಗಳ ಕೊರತೆ ಹಾಗೂ ಆಕಸ್ಮಿಕ ಸನ್ನಿವೇಶ: ಕ್ರಿಮಿನಲ್ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ!
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಶೌಚಾಲಯಗಳ ಕೊರತೆಯಿಂದಾಗಿ ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಆಕಸ್ಮಿಕವಾಗಿ ದೇಹದ ಖಾಸಗಿ ಅಂಗಗಳು ಮಹಿಳೆಯ ಕಣ್ಣಿಗೆ ಬಿದ್ದರೆ, ಅದನ್ನು ‘ಲೈಂಗಿಕ ಕಿರುಕುಳ’ ಎಂದು ವರ್ಗೀಕರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಹಾಗೂ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಚಿಕ್ಕಮಗಳೂರು ಮೂಲದ ಯುವಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ…
