TOP NEWS
Abusive Language and Physical Fights in Bigg Boss Will Sudeep Issue Red Cards Today

Bigg Boss: ಬಿಗ್‌ಬಾಸ್ ಮನೆಯಲ್ಲಿ ತಾರಕಕ್ಕೇರಿದ ಜಗಳ: ಈ ವಾರ ವೀಕೆಂಡ್ ಪಂಚಾಯ್ತಿಯಲ್ಲಿ ಕಠಿಣ ನಿರ್ಧಾರದ ಸುಳಿವು ನೀಡಿದ ಸುದೀಪ್!

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ’ (Bigg Boss) ಅಂಗಳದಲ್ಲಿ ಈ ವಾರ ನಡೆದ ಸರಣಿ ಜಗಳಗಳು, ಸ್ಪರ್ಧಿಗಳ ನಡುವಿನ ಕೆಸರೆರಚಾಟ ಹಾಗೂ ಅವಾಚ್ಯ ಶಬ್ದಗಳ ಬಳಕೆ ಗಂಭೀರ ವಿವಾದಕ್ಕೆ ಕಾರಣವಾಗಿದೆ. ಟಾಸ್ಕ್ ಹಾಗೂ ಕಳಪೆ ನೀಡುವ ಪ್ರಕ್ರಿಯೆಯಲ್ಲಿ ಸ್ಪರ್ಧಿಗಳು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದು ವೀಕ್ಷಕರ ತೀವ್ರ ಆಕ್ರೋಶಕ್ಕೆ ಈಡಾಗಿದೆ. ಇದೀಗ ಶನಿವಾರದ ವೀಕೆಂಡ್ ಪಂಚಾಯ್ತಿ ಹತ್ತಿರವಾಗಿದ್ದು, ಆಟದ ನಿರೂಪಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಿಯಮ ಮುರಿದ…

Read Full News
Gave Crores to 30 Leaders Congress MLA Pradeep Eshwar Drops Explosive Money Bombshell

Pradeep Eshwar: ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಸ್ಫೋಟಗೊಂಡ ಆಂತರಿಕ ಬೇಗುದಿ: ಸ್ವಪಕ್ಷದ ನಾಯಕರ ವಿರುದ್ಧವೇ ಶಾಸಕ ಪ್ರದೀಪ್ ಈಶ್ವರ್ ಗಂಭೀರ ಆರೋಪ!

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹಾಗೂ ಕ್ಷೇತ್ರದ ಸ್ಥಳೀಯ ನಾಯಕರ ನಡುವೆ ಸೃಷ್ಟಿಯಾಗಿದ್ದ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಬೀದಿ ರಂಪಾಟಕ್ಕೆ ತಿರುಗಿದ್ದು, ಸ್ವಪಕ್ಷೀಯರ ವಿರುದ್ಧವೇ ಶಾಸಕರು ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಂಡಿದ್ದು, ಮುಂಬರುವ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಮತ್ತೆ ಟಿಕೆಟ್ ನೀಡಬಾರದು ಎಂದು ಸ್ಥಳೀಯ ನಾಯಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ…

Read Full News
KSRTC Announces 3 000 Special Buses from October 16 to Handle Mysuru Dasara and Holiday Rush

Mysuru Dasara: ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ ಬಿಗ್ ಗಿಫ್ಟ್: ಪ್ರಯಾಣಿಕರ ಅನುಕೂಲಕ್ಕೆ 3,000 ವಿಶೇಷ ಬಸ್‌ಗಳ ಕಾರ್ಯಾಚರಣೆ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವವನ್ನು ಕಣ್ಣುತುಂಬಿಕೊಳ್ಳಲು ಸಾಂಸ್ಕೃತಿಕ ನಗರಿಗೆ ಹರಿದುಬರುವ ಲಕ್ಷಾಂತರ ಸಾರ್ವಜನಿಕರು ಹಾಗೂ ಹಬ್ಬದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಸ್ವಗ್ರಾಮಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೃಹತ್‌ ಸಾರಿಗೆ ಯೋಜನೆಯನ್ನು ರೂಪಿಸಿದೆ. ರಾಜ್ಯ ಹಾಗೂ ಹೊರರಾಜ್ಯಗಳ ವಿವಿಧ ಭಾಗಗಳಿಂದ ಆಗಮಿಸುವ ಜನಸ್ತೋಮದ ಸಂಚಾರ ಸುಗಮಗೊಳಿಸಲು ಒಟ್ಟು 3,000 ಹೆಚ್ಚುವರಿ ವಿಶೇಷ ಬಸ್‌ಗಳನ್ನು ರಸ್ತೆಗೆ ಇಳಿಸಲು ನಿಗಮ ಸಂಪೂರ್ಣ ಸಜ್ಜಾಗಿದೆ. ಸಾಮಾನ್ಯವಾಗಿ ನಿತ್ಯ ಕಾರ್ಯಾಚರಣೆ…

Read Full News
Delhi Police Officer Uses Chandni Chowk Mosque Mic to Appeal for Peace Ahead of CJP Protests

CJP Protest: ವದಂತಿಗಳಿಗೆ ಕಿವಿಗೊಡಬೇಡಿ, ಶಾಂತಿ ಕಾಪಾಡಿ: ಸಾರ್ವಜನಿಕರಿಗೆ ದೆಹಲಿ ಖಾಕಿ ಪಡೆಯ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 10 ರಂದು ಸಿಜೆಪಿ, ಎಡಪಂಥೀಯ ಸಂಘಟನೆಗಳು ಹಾಗೂ ಆಮ್ ಆದ್ಮಿ ಪಾರ್ಟಿಯ ವಿದ್ಯಾರ್ಥಿ ವಿಭಾಗಗಳು ಬೃಹತ್ ಪ್ರತಿಭಟನೆಗೆ (CJP Protest) ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಯುವಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳನ್ನು ತಲುಪಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದಾರೆ. ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ…

Read Full News
Drama Unfolds in Bigg Boss Kannada 13 Gagan Chinnappa Threatens to Exit After Heated Task Conflict

Bigg Boss: ಬಿಗ್ ಬಾಸ್ ಮನೆಯಲ್ಲಿ ಆತ್ಮಗೌರವದ ಕಿಚ್ಚು: ‘ರಾಕ್ಷಸರು-ಗಂಧರ್ವರು’ ಟಾಸ್ಕ್ ಜಗಳಕ್ಕೆ ಶೋ ಬಿಡಲು ಗಗನ್ ಚಿನ್ನಪ್ಪ ನಿರ್ಧಾರ!

ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ Bigg Boss) ಕನ್ನಡ ಸೀಸನ್ 13ರ ಆಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸ್ಪರ್ಧಿಗಳ ನಡುವೆ ಕಟು ಮಾತುಗಳು ಹಾಗೂ ವೈಯಕ್ತಿಕ ದ್ವೇಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆದ ‘ರಾಕ್ಷಸರು ವರ್ಸಸ್ ಗಂಧರ್ವರು’ ಅಂಕಣದ ಟಾಸ್ಕ್ ಮನೆಯ ವಾತಾವರಣವನ್ನು ಸಂಪೂರ್ಣವಾಗಿ ಕಲುಷಿತಗೊಳಿಸಿತ್ತು. ಸ್ಪರ್ಧಿಗಳು ಆಟದ ಭರದಲ್ಲಿ ಪರಸ್ಪರ ನಿಂದನೆ, ಕೆಟ್ಟ ಪದಗಳ ಬಳಕೆ ಹಾಗೂ ಹಿಂಸಾತ್ಮಕ ನಡವಳಿಕೆಗೆ ಇಳಿದಿದ್ದು ಪ್ರೇಕ್ಷಕರಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ, ನಟ ಗಗನ್…

Read Full News
Big news Sting Operations and Leaked Videos Cause Political Flutter Kallahalli Seeks Governor Intervention for CBI Investigation

Big News: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಧಮಾಕ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಾಗೂ ರಹಸ್ಯ ಸ್ಟಿಂಗ್ ಆಪರೇಷನ್‌ಗಳ (Big News) ಸದ್ದು ಜೋರಾಗಿದ್ದು, ಆಡಳಿತಾರೂಢ ನಾಯಕರಲ್ಲಿ ತೀವ್ರ ಕಂಗಾಲುವಾಾತಾವರಣ ನಿರ್ಮಾಣವಾಗಿದೆ. ಸಂಪುಟ ಸಭೆಯಲ್ಲಿ ಸಚಿವರಿಗೆ ಜಾಗರೂಕರಾಗಿರುವಂತೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಸುಳಿವು ಹಾಗೂ ತಮ್ಮನ್ನೇ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಹೇಳಿಕೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ…

Read Full News
Global Diwali Release for Ramayana Paid Previews to Begin in India on November 4

Ramayana: ದೀಪಾವಳಿಗೂ ಮುನ್ನವೇ ‘ರಾಮಾಯಣ-1’ ರಿಲೀಸ್: ರಣಬೀರ್-ಯಶ್ ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಪ್ರಮುಖ ಬದಲಾವಣೆ!

ಮುಂಬೈ: 2026ರ ಅತ್ಯಂತ ಕುತೂಹಲ ಕೆರಳಿಸಿರುವ ಹಾಗೂ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಬಿಡುಗಡೆ ದಿನಾಂಕದಲ್ಲಿ ಪ್ರಮುಖ ಬದಲಾವಣೆಗಳಾಗಿವೆ ಎಂಬ ವರದಿಗಳು ಹೊರಬಿದ್ದಿವೆ. ನಿತೀಶ್ ತಿವಾರಿ ನಿರ್ದೇಶನದ ಈ ಪೌರಾಣಿಕ ದೃಶ್ಯ ವೈಭವವು ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಏಕಕಾಲಕ್ಕೆ ತೆರೆಕಾಣಲು ಸಜ್ಜಾಗುತ್ತಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಕನ್ನಡಿಗರ ಹೆಮ್ಮೆಯ ನಟ ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ….

Read Full News