ನವದೆಹಲಿ: ನಾಳೆಯಿಂದ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ (Budget Session) ಆರಂಭವಾಗಲಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಮಸ್ಯೆಗಳು ಮತ್ತು ಶಾಸಕಾಂಗ ವ್ಯವಹಾರಗಳ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ಮಾಡಲಾಗಿದೆ.
ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ಮಾಡಲಾಗಿದ್ದು, ಕೇಂದ್ರ ಸಚಿವರಾದ ಕಿರಣ್ ರಿಜಿಜು, ಜೆ.ಪಿ.ನಡ್ಡಾ, ಎಲ್.ಮುರುಗನ್, ಅರ್ಜುನ್ ರಾಮ್ ಮೇಘವಾಲ್, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಡಿಎಂಕೆ ನಾಯಕ ತಿರುಚಿ ಶಿವ, ತೃಣಮೂಲ ಕಾಂಗ್ರೆಸ್ ನಾಯಕಿ ಸಾಗರಿಕಾ ಘೋಷ್, ಸಮಾಜವಾದಿ ಪಕ್ಷದ ಸಂಸದ ರಾಮಗೋಪಾಲ್ ಯಾದವ್ ಸೇರಿದಂತೆ ಸರ್ವಪಕ್ಷಗಳ ನಾಯಕರು ಭಾಗವಹಿಸಿದ್ದರು.
ಮಾರ್ಚ್ 9 ರಿಂದ ಎರಡನೇ ಹಂತದ ಅಧಿವೇಶನ
ಏಪ್ರಿಲ್ 2 ರವರೆಗೆ ನಡೆಯುವ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳನ್ನು ಸುಗಮಗೊಳಿಸುವ ಮತ್ತು ಪ್ರಮುಖ ರಾಷ್ಟ್ರೀಯ ಸಮಸ್ಯೆಗಳನ್ನು ನಿರ್ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಮೊದಲ ಹಂತವು ನಾಳೆಯಿಂದ ಫೆಬ್ರವರಿ 13 ರವರೆಗೆ ನಿಗದಿಯಾಗಿದ್ದರೆ, ಎರಡನೇ ಹಂತವು ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ‘ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ’ ಸೇರಿದಂತೆ ಸುಮಾರು 9 ಪ್ರಮುಖ ಮಸೂದೆಗಳು ಚರ್ಚೆಗೆ ಬರುವ ನಿರೀಕ್ಷೆಯಿದೆ.
ಇದನ್ನೂ ಓದಿ: ಕೆನಡಾ-ಭಾರತ ನಡುವೆ ಮತ್ತೆ ತೈಲ ವ್ಯಾಪಾರ, ಅಮೆರಿಕಗೆ ಟಕ್ಕರ್ ಕೊಡಲು ಹೊಸ ಪ್ಲ್ಯಾನ್
