Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

Ajit Pawar 4 others lost life in plane crash

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ .

ಚಾರ್ಟರ್ಡ್ ವಿಮಾನ ಪತನ

ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ

ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯಲು  ಪ್ರಯತ್ನ ಮಾಡುತ್ತಿದ್ದಾಗ, ಈ ಅಪಘಾತ ಸಂಭವಿಸಿದೆ. ಆದದರೆ, ಪವಾರ್ ಅವರ ಕಚೇರಿ ಅಥವಾ ಸರ್ಕಾರಿ ಅಧಿಕಾರಿಗಳಿಂದ ಇದುವರೆಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಯಾಣಿಕರ ಸ್ಥಿತಿ ಮತ್ತು ಘಟನೆಯ ಕುರಿತು ಹೆಚ್ಚಿನ ವಿವರಗಳು ಸದ್ಯದಲ್ಲಿ ಸಿಗಲಿದೆ.

ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪವಾರ್ ಭಾಗವಹಿಸಿದ್ದರು ಮತ್ತು ಪುಣೆಯಲ್ಲಿ ನಡೆಯಲಿರುವ ನಾಗರಿಕ ಚುನಾವಣೆಗಳಿಗೆ ಸಂಬಂಧಿಸಿದ ಸಭೆಗಳಿಗಾಗಿ ಬಾರಾಮತಿಗೆ ತೆರಳುತ್ತಿದ್ದರು. ಇನ್ನೂ ಅಪಘಾತಕ್ಕೆ ನಿಖರ ಕಾರಣ ಹಾಗೂ ಅಜಿತ್‌ ಪವರ್‌ ಅವರ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದೆ.

ಇದನ್ನೂ ಓದಿ: ದಾಖಲೆ ಬರೆದ ಪರೀಕ್ಷಾ ಪೆ ಚರ್ಚಾ, 6.76 ಕೋಟಿಗೂ ಹೆಚ್ಚು ಜನರು ಭಾಗಿ

Leave a Reply

Your email address will not be published. Required fields are marked *