Ashwini Vaishnaw: ನ್ಯಾನೋ ಮೀಟರ್ ಚಿಪ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅಶ್ವಿನಿ ವೈಷ್ಣವ್

Ashwini Vaishnaw visited Bengaluru semi conductor production unit

ಬೆಂಗಳೂರು: ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಬೆಂಗಳೂರಿನಲ್ಲಿ ತಂತ್ರಜ್ಞಾನ, ಸಂಶೋಧನೆ, ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಚಿವರು

ಕ್ವಾಲ್‌ಕಾಲ್ ಸಂಸ್ಥೆಯ ಎರಡು ನ್ಯಾನೋ ಮೀಟರ್ ಚಿಪ್ ವಿನ್ಯಾಸ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಉನ್ನತ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, 2020ರಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಕಂಪನಿಗಳು ಭಾರತಕ್ಕೆ ಆಗಮಿಸಿ ಪ್ರಾಥಮಿಕ ಹಂತದ ಉತ್ಪನ್ನ ತಯಾರಿಕೆಯಲ್ಲಿ ನಿರತವಾಗಿವೆ. ಬರುವ ದಿನಗಳಲ್ಲಿ 7 ನ್ಯಾನೋ ಮೀಟರ್ ಚಿಪ್ ತಯಾರಿಕೆ ಮತ್ತು ಸ್ಯಾಬ್ ತಯಾರಿಕೆಗೆ ಭಾರತ ದಾಪುಗಾಲು ಹಾಕಲಿದೆ ಎಂದು ಹೇಳಿದ್ದಾರೆ.

ಅಮೆರಿಕದೊಂದಿಗೆ ವ್ಯಾಪಾರ

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದವೇರ್ಪಟ್ಟ ನಂತರ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಪ್ರಗತಿ ಸಾಧಿಸಲಿದ್ದು, ವಿಶ್ವಕ್ಕೆ ಅಗತ್ಯ ಚಿಪ್ ತಯಾರಿಸುವಲ್ಲಿ ಪ್ರಮುಖವಾದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.  ಇಂದು ದೇಶದಲ್ಲಿ 350ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಕೃತಕಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕಂಪನಿಗಳು ಮತ್ತು ಸರ್ಕಾರದೊಂದಿಗೆ ಕೈಜೋಡಿಸಿದ್ದು, ಸಂಶೋಧನಾ ಕೆಲಸದಲ್ಲಿ ನಿರತವಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ಇಂಧನ ಸುರಕ್ಷತೆಗೆ ಕೇಂದ್ರ ಸರ್ಕಾರ ಬದ್ಧ: ರಣಧೀರ್‌ ಜೈಸ್ವಾಲ್‌

Leave a Reply

Your email address will not be published. Required fields are marked *