DK Shivakumar: ದೆಹಲಿಯಲ್ಲಿ ನಾಯಕರ ಜೊತೆ ಡಿಕೆಶಿ ಸಭೆ, ಕಾಲವೇ ಉತ್ತರ ನೀಡಲಿದೆ ಎಂದ ಡಿಸಿಎಂ

Dcm DK Shivakumar meeting with high command leaders in delhi

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಕಾಲವೇ ಉತ್ತರ ನೀಡಲಿದೆ

ನಂತರ ಮಾಧ್ಯಮಗಳಿಗೆ ಅಧಿಕಾರ ಹಂಚಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಾಯಕರನ್ನು ಈಗಾಗಲೇ ಭೇಟಿ ಮಾಡಿದ್ದು, ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ. ಬೀದಿಯಲ್ಲಿ ನಿಂತು ರಾಜಕೀಯ ಮಾಡಲು ಸಿದ್ಧವಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಿಂದ ಸಭೆ

 ಇನ್ನೊಂದೆಡೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಇಕ್ಬಾಲ್ ಹುಸೇನ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಪಕ್ಷದ 80 ರಿಂದ 90 ಶಾಸಕರು ಬಯಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಈ ನಡುವೆ, ಕೆಲವು ಕಾಂಗ್ರೆಸ್ ಶಾಸಕರು ಕೈಗೊಂಡಿರುವ ವಿದೇಶ ಪ್ರವಾಸವನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ.  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರವಾಸದಲ್ಲಿ ಭಾಗವಹಿಸುವ ಶಾಸಕರ ವಿವರ ಕೋರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

Leave a Reply

Your email address will not be published. Required fields are marked *