ಮೈಸೂರು: ಅವಧೂತ ದತ್ತಪೀಠದ ವತಿಯಿಂದ ಮೈಸೂರು (Mysuru) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಾಮೂಹಿಕ ’ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ’ ನಿನ್ನೆ ಶ್ರದ್ಧೆ, ಭಕ್ತಿಭಾವದಿಂದ ನೆರವೇರಿತು.
50 ಸಾವಿರ ಜನ ಸೇರಿದ್ದ ಕಾರ್ಯಕ್ರಮ
ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಿಕ್ಕಿರಿದು ಸೇರಿದ್ದ 50 ಸಾವಿರಕ್ಕೂ ಹೆಚ್ಚು ಭಕ್ತರು ಹನುಮನ ಸ್ಮರಣೆ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪವಮಾನ ಹೋಮ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು. ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ರಾಷ್ಟ್ರಗೀತೆಯನ್ನು ಹಾಡುವುದರೊಂದಿಗೆ ಮಹಾಯಜ್ಞ ಸಂಪನ್ನಗೊಂಡಿತು.
ಇದನ್ನೂ ಓದಿ: ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್ ಅಶೋಕ್ ಆಗ್ರಹ
