ಕೋಲಾರ: ಮುಂಬರುವ ರಾಜ್ಯ ಬಜೆಟ್ (State Budget) ಅಧಿವೇಶನದಲ್ಲಿ ಸರ್ಕಾರದಲ್ಲಿರುವ 43 ಇಲಾಖೆಯ ಸುಮಾರು 2 ಲಕ್ಷ 80 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರವನ್ನು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದ್ದಾರೆ.
ಖಾಯಂ ಉದ್ಯೋಗಿಗಳಾಗಿ ನೇಮಕ ಮಾಡುವಂತೆ ಆಗ್ರಹ
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಉದ್ಯೋಗಿಗಳಾಗಿ ನೇಮಕ ಮಾಡಿಕೊಳ್ಳಲು ಮುಂಬರುವ ಬಜೆಟ್ ಅಧಿವೇಶನದಲ್ಲಿ ಚರ್ಚೆಯಾಗುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
