BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

BY Vijayendra oppose arrest of bjp mla Chandra lamani

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.  

ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ

 ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ ಎದುರಿಸಲಿದೆ. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ ಹಾಗೂ ಈಗಾಗಲೇ ಹೊರಬಿದ್ದಿರುವ ಆಡಿಯೋ ತುಣುಕುಗಳನ್ನು ಪರಿಶೀಲಿಸಬೇಕಿದೆ ಎಂದು ಆಗ್ರಹ ಮಾಡಿದ್ದಾರೆ.

ಅಧಿವೇಶನದ ಬಗ್ಗೆ ಚರ್ಚೆ ಮಾಡಲಾಗುತ್ತದೆ

  ಮಾರ್ಚ್ ಮೊದಲ ವಾರದಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದ ಕುರಿತು ಪ್ರಸ್ತಾಪಿಸಿದ ಅವರು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

Leave a Reply

Your email address will not be published. Required fields are marked *