ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ , ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಆರೋಪ ಮಾಡಿದ್ದಾರೆ.
ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ದೇಶದ ಜನರ ಹಿತಾಸಕ್ತಿಗಳನ್ನು ಪಣಕ್ಕಿಡುತ್ತಿದೆ. ಹೆಚ್ಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಜಾಗತಿಕವಾಗಿ ವೃದ್ಧಿಯಾಗುತ್ತಿರುವ ಭಾರತದ ಪ್ರಾಬಲ್ಯವನ್ನು ಸಹಿಸಲು ರಾಹುಲ್ ಗಾಂಧಿಗೆ ಸಾಧ್ಯವಾಗುತ್ತಿಲ್ಲ ಎಂದು ಸಚಿವರು ಟೀಕೆ ಮಾಡಿದ್ದಾರೆ.
ಆರೋಪಗಳ ಸುರಿಮಳೆ ಸುರಿಸಿದ ಗೋಯಲ್
ಅಲ್ಲದೇ, ವಿದೇಶಿ ಶಕ್ತಿಗಳ ಪ್ರಭಾವದಿಂದ ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿದೆ ಎಂದು ಗೋಯಲ್ ಆರೋಪಿಸಿದ್ದಾರೆ.
