TOP NEWS

DK Shivakumar; ಸರ್ಕಾರದ ಕೆಲಸಗಳನ್ನ ಹಾಡಿ ಹೊಗಳಿದ ಡಿಕೆ ಶಿವಕುಮಾರ್

DK Shivakumar talks about government development programs

ಕಲಬುರಗಿ: ಜಿಲ್ಲೆಯ ಸಮಗ್ರ ಪ್ರಗತಿಗೆ ಕಳೆದ 2 ವರ್ಷಗಳಲ್ಲಿ ಸರ್ಕಾರ 2 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಿದ್ದು, ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಬಡವರಿಗೆ 2 ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ

ಕಲಬುರಗಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 365 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ತೊರ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 330 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದರು.

56 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 56 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯದ ಭವಿಷ್ಯದ ನಾಯಕ ಎಂದು ಶ್ಲಾಘಿಸಿದ ಉಪಮುಖ್ಯಮಂತ್ರಿಯವರು, ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕ 52 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿರುವ ಸರ್ಕಾರವು, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನಕ್ಕೂ ಹೆಚ್ಚಿನ ಪರಿಹಾರ ನಿಗದಿಪಡಿಸುವ ಮೂಲಕ ರೈತರ ಪರವಾಗಿ ನಿಂತಿದೆ ಎಂದರು.

ಇದನ್ನೂ ಓದಿ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

Leave a Reply

Your email address will not be published. Required fields are marked *