ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ.
ಬಿಜೆಪಿ ಸಂಸದರ ಧ್ಬನಿ ಎತ್ತಬೇಕು
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ
ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಶಾಸಕರು ಹಾಗೂ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
