ನವದೆಹಲಿ: ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಇತ್ತೀಚೆಗೆ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನದಿಂದ ವಿರಾಮ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ಈ ನಿರ್ಧಾರವನ್ನು ಧೈರ್ಯಯುತ ನಿರ್ಧಾರ ಎಂದು ಕರೆದಿದ್ದು ಅವರು ಕೂಡ ಬ್ರೇಕ್ ತೆಗೆದುಕೊಳ್ಳುವ ಬಗ್ಗೆಯೂ ಯೋಚಿಸುತ್ತಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ನನಗೂ ಬ್ರೇಕ್ ತೆಗೆದುಕೊಳ್ಳುವ ಮನಸ್ಸಿದೆ
ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತರಾದ ಬಗ್ಗೆ ಮಾಡಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದು, ನನಗೂ ಸಹ ಆಗಾಗ ಬ್ರೇಕ್ ತೆಗೆದುಕೊಳ್ಳಬೇಕು ಎಂದು ಅನಿಸುತ್ತದೆ. ಅರಿಜಿತ್ ಸಿಂಗ್ ಧೈರ್ಯದಿಂದ ಈ ನಿರ್ಧಾರ ಮಾಡಿದಾರೆ. ಹ್ಯಾಟ್ಸ್ ಆಫ್ ಅವರಿಗೆ ಎಂದು ಹೇಳಿದ್ದಾರೆ.
ಅಭಿಮಾನಿಗಳಿಗೆ ಶಾಕ್ ನೀಡಿದ್ದ ಅರಿಜಿತ್ ಸಿಂಗ್
ಈ ವರ್ಷದ ಜನವರಿ 27 ರಂದು ಅರಿಜಿತ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದರು. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಅವರು “ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ತುಂಬಾ ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ಹಿನ್ನೆಲೆ ಗಾಯಕನಾಗಿ ನಾನು ಯಾವುದೇ ಹೊಸ ಹಾಡುಗಳನ್ನ ಹಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಬಾಲಿವುಡ್‌ಗಾಗಿ ಹಿನ್ನೆಲೆ ಹಾಡುಗಳನ್ನು ರೆಕಾರ್ಡ್ ಮಾಡುವುದಿಲ್ಲವಾದರೂ, ಸ್ವತಂತ್ರವಾಗಿ ಸಂಗೀತ ಮಾಡುವುದನ್ನು ಮುಂದುವರಿಸುತ್ತೇನೆ ಎಂದು ಹೇಲಿದ್ದಾರೆ.
ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?
