Heavy Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಆಸ್ತಿಪಾಸ್ತಿಗೆ ಹಾನಿ

Chikkamagaluru Heavy Rain effects on people

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರಿ ಮಳೆಗೆ (Heavy Rain) ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಆಸ್ತಿಪಾಸ್ತಿಗೆ ಅಪಾರ ಹಾನಿ ಸಂಭವ

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿದೆ.  ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಮತ್ತು ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಮಳೆಯ ಆರ್ಭಟಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲೆ ಆವರಿಸಿದೆ. ಈ ನಡುವೆ ಜಿಲ್ಲೆಯಲ್ಲಿ ಇನ್ನು 4 ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ

Leave a Reply

Your email address will not be published. Required fields are marked *