ಕೋಲಾರ: ಕಲಬೆರಕೆ ಹಾಲು ಮತ್ತು ಅಸುರಕ್ಷಿತ ಕುಡಿಯುವ ನೀರು (Crime) ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಡೈರಿಗಳಲ್ಲಿ ಕಲಬೆರಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯಾದ್ಯಂತ ಸಂಗ್ರಹಿಸಲಾಗಿದ್ದ ಒಟ್ಟು 48 ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 18 ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಇರುವುದು ದೃಢಪಟ್ಟಿದೆ. ವಿಶೇಷವಾಗಿ ಖಾಸಗಿ ಡೈರಿಗಳು ಲಾಭದ ಉದ್ದೇಶಕ್ಕಾಗಿ ಹಾಲಿನಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡಿ ಕಲಬೆರಕೆ ಮಾಡುತ್ತಿರುವುದು ಕಂಡುಬಂದಿದೆ” ಎಂದರು.
12 ಕೇಂದ್ರಗಳಿಗಿಲ್ಲ ಪರವಾನಗಿ
ಗುಣಮಟ್ಟವಿಲ್ಲದ ಹಾಲು ಸರಬರಾಜು ಮಾಡುತ್ತಿರುವ ಡೈರಿಗಳ ವಿರುದ್ಧ ಮೊಕದ್ದಮೆ ದಾಖಲಿಸಲು ತೀರ್ಮಾನಿಸಲಾಗಿದೆ. ಜಿಲ್ಲೆಯಲ್ಲಿರುವ 12 ಹಾಲು ಸಂಗ್ರಹಣಾ ಕೇಂದ್ರಗಳು ಪರವಾನಗಿ ಪಡೆಯದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳನ್ನು ತಕ್ಷಣವೇ ಸ್ಥಗಿತಗೊಳಿಸಿ, ನಿಯಮಾನುಸಾರ ಪರವಾನಗಿ ಪಡೆಯಲು 7 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
