DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

DK Shivakumar social media post about GBA north budget

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

108 ಕೋಟಿ ಆದಾಯದ ನಿರೀಕ್ಷೆ

ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಭಿವೃದ್ಧಿಪಡಿಸಲು 40 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ವಸತಿ ಯೋಜನೆಗೆ ಸುಮಾರು 71 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.  ಬಜೆಟ್‌ನಲ್ಲಿ ರಸ್ತೆ, ಚರಂಡಿ ವ್ಯವಸ್ಥೆ, ಕೆರೆಗಳ ಅಭಿವೃದ್ಧಿ, ಶೈಕ್ಷಣಿಕ ಅಭಿವೃದ್ಧಿ, ಗ್ರಂಥಾಲಯಗಳ ಉನ್ನತೀಕರಣ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ನವ ಮಂಗಳೂರು ಬಂದರಿಗೆ ಬಂದ ಕಚ್ಚಾತೈಲ ನೌಕೆ

Leave a Reply

Your email address will not be published. Required fields are marked *