Tennis: ತುಮಕೂರಿನಲ್ಲಿ ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್

Women international tennis tournament in tumkur

ತುಮಕೂರು: ಜಿಲ್ಲೆಯಲ್ಲಿ ಮೇ 3 ರಿಂದ 10 ರವರೆಗೆ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ತುಮಕೂರು ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್ (Tennis) ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

12 ದೇಶಗಳ ಆಟಗಾರರು ಬಾಗಿ

 ತುಮಕೂರು ಜಿಲ್ಲೆಯ ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂತರರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದೆ. ವಿಶ್ವಾದ್ಯಂತ 100 ಕ್ಕೂ ಹೆಚ್ಚು ಕ್ರೀಡಾಪಟುಗಳು ಸುಮಾರು 12 ದೇಶಗಳಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. 

30 ಸಾವಿರ ಅಮೆರಿಕನ್‌ ಡಾಲರ್‌ ಬಹುಮಾನ

ಈ ಕೂಟದಲ್ಲಿ ವಿಜೇತರಾಗುವ ಕ್ರೀಡಾಪಟುಗಳು 30 ಸಾವಿರ ಅಮೆರಿಕನ್ ಡಾಲರ್‌ಗಳನ್ನು ಗೆಲ್ಲಲಿದ್ದಾರೆ. ಅಲ್ಲದೆ ನಂತರದ ಸ್ಥಾನವನ್ನು ಹೊಂದುವ ಆಟಗಾರರು ಅಂತರರಾಷ್ಟ್ರೀಯ ರ‍್ಯಾಂಕಿಂಗ್‌ಗಳನ್ನು ಪಡೆಯಲಿದ್ದಾರೆ ಎಂದು ಅವರು ವಿವರಿಸಿದರು. ತುಮಕೂರು ಜಿಲ್ಲಾಡಳಿತ, ತುಮಕೂರು ಟೆನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಈ ಅಂತರರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಯಲಿದೆ.  ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತುಮಕೂರು ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಕೆಲಸ ಪ್ರಾರಂಭವಾಗಿದೆ. ಅಂತರರಾಷ್ಟ್ರೀಯ ಹಾಕಿ ಕ್ರೀಡಾಂಗಣ ಹಾಗೂ ಅಂತರರಾಷ್ಟ್ರೀಯ ಈಜುಕೊಳ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಸಚಿವ ಜಿ. ಪರಮೇಶ್ವರ್ ಅವರು ಅಂತರರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟದ ಲಾಂಛನವನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

Leave a Reply

Your email address will not be published. Required fields are marked *