ಬೆಂಗಳೂರು: ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್ ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್ ಗಳನ್ನು ಸರಬರಾಜು ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (Muniyappa) ಹೇಳಿದ್ದಾರೆ.
ನಾಳೆಯಿಂದ ನಿರಂತರ ಸರಬರಾಜು
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು, ಪ್ರಸಕ್ತ ರಾಜ್ಯದಲ್ಲಿ ಶೇಕಡ 20ರಷ್ಟು ಮಾತ್ರ ವಾಣಿಜ್ಯ ಅಡುಗೆ ಅನಿಲ ಸರಬರಾಜಾಗುತ್ತಿದೆ. ಆದರೆ, ಆಸ್ಪತ್ರೆಗಳಿಗೆ ಮಾತ್ರ ಶೇಕಡ 100ರಷ್ಟು ಗ್ಯಾಸ್ ಸಿಲಿಂಡರ್ ಗಳ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವ ಹರ್ ದೀಪ್ ಸಿಂಗ್ ಪುರಿ ಅವರೊಂದಿಗೆ ಸಭೆ ನಡೆಸಲಾಗಿದ್ದು, ಅಡುಗೆ ಅನಿಲ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯ ಸರಿಪಡಿಸಲು ಪ್ರಯತ್ನಿಸಲಾಗುತ್ತಿದೆ. ಜನಸಾಮಾನ್ಯರಿಗೆ ನಗರ ಪ್ರದೇಶದಲ್ಲಿ 25 ದಿನಗಳಿಗೆ ಹಾಗೂ ಗ್ರಾಮೀಣ ಭಾಗದಲ್ಲಿ 45 ದಿನಗಳಿಗೆ ಒಂದು ಗೃಹೋಪಯೋಗಿ ಸಿಲಿಂಡರ್ ವಿತರಿಸಲಾಗುತ್ತಿದೆ. ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ವಿತರಣೆಗೆ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವರೊಂದಿಗೆ ಸಭೆ
ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿರುವುದ ಬಗ್ಗೆಯೂ ಪ್ರಧಾನಿ ಹಾಗೂ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಮಂಗಳವಾರ ಕೇಂದ್ರ ಸಚಿವರೊಂದಿಗೆ ಮತ್ತೊಮ್ಮೆ ಸಭೆ ನಿಗದಿಯಾಗಿದೆ. ಆ ಸಭೆಯ ಬಳಿಕ ವಾಣಿಜ್ಯ ಅಡುಗೆ ಅನಿಲ ಸರಬರಾಜು ವ್ಯತ್ಯಯ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ
