PUC Result: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಹೀಗೆ ಚೆಕ್‌ ಮಾಡಿ

Second puc result announced

ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ (PUC Result) ಇಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಆನ್‌ಲೈನ್‌ನಲ್ಲಿ ಈಗಾಗಲೇ ಫಲಿತಾಂಶ ಲಭ್ಯವಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಗಳನ್ನು ನೀಡಲಿದ್ದಾರೆ.

ರಿಸಲ್ಟ್‌ ನೋಡೋದು ಹೇಗೆ?

ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ವೆಬ್‌ಸೈಟ್ ಪ್ರವೇಶಿಸಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿದರೆ ಸಾಕು, ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಿಕೊಳ್ಳಲಿದೆ. ಫಲಿತಾಂಶ ಪ್ರಕಟವಾದ ತಕ್ಷಣ ವೆಬ್‌ಸೈಟ್ ಮೇಲೆ ಹೆಚ್ಚಿನ ಒತ್ತಡವಿರುವುದರಿಂದ ಸರ್ವರ್ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಪಡದೆ ಡಿಜಿಲಾಕರ್ (DigiLocker) ಆ್ಯಪ್ ಅಥವಾ ವೆಬ್‌ಸೈಟ್ ಮೂಲಕವೂ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಬಾರಿ ವಿಶೇಷ ಅವಕಾಶ ಕಲ್ಪಿಸಲಾಗಿದೆ.

ಫೆಬ್ರವರಿ 28 ರಿಂದ ಮಾರ್ಚ್ 12 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ರಾಜ್ಯದ 1217 ಕೇಂದ್ರಗಳಲ್ಲಿ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ ವಿಜ್ಞಾನ ವಿಭಾಗದಿಂದ 2.92 ಲಕ್ಷ, ವಾಣಿಜ್ಯ ವಿಭಾಗದಿಂದ 2.11 ಲಕ್ಷ ಮತ್ತು ಕಲಾ ವಿಭಾಗದಿಂದ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ವಿದ್ಯಾರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿ ತಲುಪಲಿದ್ದು, ತಂತ್ರಜ್ಞಾನದ ನೆರವಿನಿಂದಾಗಿ ಈ ಬಾರಿ ಫಲಿತಾಂಶ ವೀಕ್ಷಣೆ ಅತ್ಯಂತ ಸರಳವಾಗಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

Leave a Reply

Your email address will not be published. Required fields are marked *