TOP NEWS

Rahul Gandhi: ಜೀವನದಲ್ಲಿ ಅತಿದೊಡ್ಡ ರಿಸ್ಕ್ ಯಾವುದು?”: ರಾಹುಲ್ ಗಾಂಧಿಗೆ ವಿದ್ಯಾರ್ಥಿನಿ ನೀಡಿದ ಅಚ್ಚರಿಯ ಉತ್ತರ!

Rahul Gandhi fun incidents with collage students

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಗಾರ್ಗಿ ಕಾಲೇಜಿಗೆ ಭೇಟಿ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದ ವೇಳೆ ನಡೆದ ತಮಾಷೆಯ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಮಾಷೆಯ ಉತ್ತರ ನೀಡಿದ ವಿದ್ಯಾರ್ಥಿನಿ

ಸಂವಾದದ ಮಧ್ಯೆ ರಾಹುಲ್ ಗಾಂಧಿ ಅವರು ವಿದ್ಯಾರ್ಥಿನಿಯೊಬ್ಬರನ್ನು ಉದ್ದೇಶಿಸಿ, “ನಿಮ್ಮ ಜೀವನದಲ್ಲಿ ನೀವು ಮಾಡಿದ ಅತ್ಯಂತ ಅಪಾಯಕಾರಿ (ರಿಸ್ಕ್) ಕೆಲಸ ಯಾವುದು?” ಎಂದು ಪ್ರಶ್ನಿಸಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ, “ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು” ಎಂದು ಉತ್ತರಿಸಿದಳು. ಆಕೆಯ ಈ ದಿಟ್ಟ ಹಾಗೂ ತಮಾಷೆಯ ಉತ್ತರ ಕೇಳಿ ಸಭಾಂಗಣದಲ್ಲಿದ್ದವರೆಲ್ಲರೂ ಜೋರಾಗಿ ನಕ್ಕರು. ವಿದ್ಯಾರ್ಥಿನಿಯ ಚುಟುಕು ಉತ್ತರಕ್ಕೆ ರಾಹುಲ್ ಗಾಂಧಿ ಕೂಡ ನಗುತ್ತಲೇ, “ಅದಂತೂ ನಿಜಕ್ಕೂ ರಿಸ್ಕ್ ಕೆಲಸವೇ” ಎಂದು ಪ್ರತಿಕ್ರಿಯಿಸಿ ಪರಿಸ್ಥಿತಿಯನ್ನು ಹಗುರಗೊಳಿಸಿದರು. ಈ ವಿಡಿಯೋವನ್ನು ರಾಹುಲ್ ಗಾಂಧಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದೇ ಸಂವಾದದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಇಂದಿನ ಯುವತಿಯರು (ಜೆನ್-ಝಡ್) ಮುಂದಿನ ದಿನಗಳಲ್ಲಿ ದೇಶವನ್ನು ಮುನ್ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳ ಬಾಗಿಲು ತೆರೆದಿಡುವುದು ನಮ್ಮ ಕರ್ತವ್ಯ ಎಂದು ಹೇಳಿದ ಅವರು, ಪುರುಷರಿಗಿಂತ ಮಹಿಳೆಯರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲರು ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮತ್ತು ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾಧನೆಗಳನ್ನು ಸ್ಮರಿಸಿದ ರಾಹುಲ್ ಗಾಂಧಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜಕೀಯ, ಕಾರ್ಪೊರೇಟ್ ಮತ್ತು ದೇಶದ ಪ್ರಮುಖ ಸಂಸ್ಥೆಗಳಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸಲು ಬದ್ಧವಾಗಿರುವುದಾಗಿ ಭರವಸೆ ನೀಡಿದರು. ನಮ್ಮ ದೇಶದ ಭವಿಷ್ಯ ಸಮರ್ಥರ ಕೈಯಲ್ಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಡ್ರಗ್ ಮಾಫಿಯಾ ಡಾನ್ ಸಲೀಂ ಡೋಲಾ ಭಾರತಕ್ಕೆ ಗಡಿಪಾರು: ಅಮಿತ್ ಶಾ ಮೆಚ್ಚುಗೆ

Leave a Reply

Your email address will not be published. Required fields are marked *