ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು.
ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ ಬಳಸಿ ಸಿಬ್ಬಂದಿಗಳ ಮೂಲಕ ಮತಪತ್ರಗಳಲ್ಲಿ ತಿದ್ದುಪಡಿ ಮಾಡಿಸಿದೆ ಎಂಬುದು ಮುಖ್ಯಮಂತ್ರಿಗಳ ಗಂಭೀರ ಆರೋಪವಾಗಿದೆ. ಈ ಅನ್ಯಾಯವನ್ನು ಸಹಿಸದೆ ಕಾನೂನು ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು… pic.twitter.com/dn61ltrgcV
— Siddaramaiah (@siddaramaiah) May 6, 2026
ಕೇಂದ್ರದ ಕನ್ನಡ ವಿರೋಧಿ ಧೋರಣೆ: ರೈಲ್ವೆ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉಂಟಾಗುತ್ತಿರುವ ಅನ್ಯಾಯದ ಬಗ್ಗೆಯೂ ಧ್ವನಿ ಎತ್ತಿದ ಸಿಎಂ, ಕೇಂದ್ರ ಸರ್ಕಾರವು ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯರನ್ನು ಕಡೆಗಣಿಸುವ ಮೂಲಕ ಕನ್ನಡಿಗರ ವಿರೋಧಿ ಧೋರಣೆ ತಳೆಯುತ್ತಿದೆ ಎಂದು ಕಿಡಿಕಾರಿದರು.
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ.
— Siddaramaiah (@siddaramaiah) May 6, 2026
ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ… pic.twitter.com/Gn99OJQGfK
ಸರ್ಕಾರ ಸುಭದ್ರ: ಇತ್ತೀಚಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸರ್ಕಾರದ ಯೋಜನೆಗಳಿಗೆ ಸಂದ ಜಯವಾಗಿದೆ ಎಂದು ಸಿದ್ದರಾಮಯ್ಯ ಬಣ್ಣಿಸಿದರು. “ವಿಪಕ್ಷಗಳ ಯಾವ ಕುತಂತ್ರವೂ ಫಲ ನೀಡುವುದಿಲ್ಲ, ನಮ್ಮ ಸರ್ಕಾರ ಐದು ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಯಕತ್ವ ಬದಲಾವಣೆಯ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹೈಕಮಾಂಡ್ ಸೂಚನೆ ನೀಡಿದರೆ ಮಾತ್ರ ದೆಹಲಿಗೆ ಹೋಗುವುದಾಗಿ ಮತ್ತು ವರಿಷ್ಠರ ತೀರ್ಮಾನಕ್ಕೆ ತಾವು ಸದಾ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಶೃಂಗೇರಿ ಕೋರ್ಟ್ ಕದನ ಗೆದ್ದ ಜೀವರಾಜ್: ನಿಜವಾಯಿತು ಶಬರಿಮಲೆ ಪೂಜಾರಿಯ ಭವಿಷ್ಯವಾಣಿ!
