TOP NEWS

Davanagere: ಹರಿಹರ ಠಾಣೆಯಲ್ಲಿ ವಚನಾನಂದ ಶ್ರೀಗಳ ವಿಚಾರಣೆ: ಕಾನೂನು ಗೌರವಿಸುತ್ತೇವೆ ಎಂದ ಸ್ವಾಮೀಜಿ.

Davanagere vachanananda swamiji talks about pocso case after interrogations

ದಾವಣಗೆರೆ: ಪೋಕ್ಸೋ ಕಾಯ್ದೆಯಡಿ ಗಂಭೀರ ಆರೋಪ (Davanagere) ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿಯವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾಗಿದ್ದ ಶ್ರೀಗಳಿಗೆ ತನಿಖಾಧಿಕಾರಿಗಳು ಸುದೀರ್ಘ 4 ಗಂಟೆಗಳ ಕಾಲ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ.

ಖಾಕಿ ಪಡೆಯಿಂದ 50ಕ್ಕೂ ಹೆಚ್ಚು ಪ್ರಶ್ನೆಗಳು: ಹರಿಹರ ಗ್ರಾಮಾಂತರ ಠಾಣೆಯ ಡಿವೈಎಸ್‌ಪಿ ಬಸವರಾಜ ಹಾಗೂ ಪಿಎಸ್‌ಐ ಮಂಜುಳಾ ಅವರ ನೇತೃತ್ವದಲ್ಲಿ ನಡೆದ ಈ ವಿಚಾರಣೆಯಲ್ಲಿ, ಸ್ವಾಮೀಜಿಯವರಿಗೆ ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ. ಮಠದಲ್ಲಿ ನಡೆದಿದೆ ಎನ್ನಲಾದ ಘಟನೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದು, ವಿಚಾರಣೆಯ ಬಳಿಕ ಶ್ರೀಗಳನ್ನು ವೈದ್ಯಕೀಯ ತಪಾಸಣೆಗಾಗಿ ಹರಿಹರ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಪ್ರಕರಣದ ಹಿನ್ನೆಲೆ ಏನು? ಗದಗದ ಲಕ್ಷ್ಮೇಶ್ವರದಲ್ಲಿ ವಚನಾನಂದ ಸ್ವಾಮೀಜಿ ವಿರುದ್ಧ ಮೊದಲು ದೂರು ದಾಖಲಾಗಿತ್ತು. ಆದರೆ, ಘಟನೆ ನಡೆದ ಸ್ಥಳದ ವ್ಯಾಪ್ತಿಯನ್ನು ಪರಿಗಣಿಸಿ ಈ ಪ್ರಕರಣವನ್ನು ಈಗ ಹರಿಹರ ಠಾಣೆಗೆ ವರ್ಗಾಯಿಸಲಾಗಿದೆ ಎಂದು ದಾವಣಗೆರೆ ಎಸ್‌ಪಿ ಹೆಚ್.ಟಿ. ಶೇಖರ್ ತಿಳಿಸಿದ್ದಾರೆ. ಮಠದಲ್ಲಿದ್ದ ಮೂವರು ಮಕ್ಕಳು ತಮ್ಮ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆದಿದೆ ಎಂದು ನೀಡಿದ್ದ ದೂರಿನ ಆಧಾರದ ಮೇಲೆ, ಏಪ್ರಿಲ್ 17ರಂದು ಮಕ್ಕಳ ಕಲ್ಯಾಣ ಸಮಿತಿ ಪರಿಶೀಲನೆ ನಡೆಸಿತ್ತು. ಇದಾದ ಬಳಿಕವೇ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.

ಸ್ವಾಮೀಜಿ ಮೊದಲ ಪ್ರತಿಕ್ರಿಯೆ: ಸುದೀರ್ಘ ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ವಚನಾನಂದ ಶ್ರೀಗಳು ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದರು. “ನಾವು ಈ ದೇಶದ ಕಾನೂನಿಗೆ ಬದ್ಧರಾಗಿದ್ದೇವೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸುತ್ತೇವೆ” ಎಂದು ಹೇಳುವ ಮೂಲಕ ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಸದ್ಯ ಈ ಪೋಕ್ಸೋ ಪ್ರಕರಣ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಧಾರವಾಡದ ಯೋಗೀಶ್ ಗೌಡ ಹತ್ಯೆ ಕೇಸ್: ಮಾಜಿ ತನಿಖಾಧಿಕಾರಿಗೆ ಸಿಗದ ರಿಲೀಫ್

Leave a Reply

Your email address will not be published. Required fields are marked *