TOP NEWS

CM Siddaramaiah: ರಾಜೀನಾಮೆ ವದಂತಿ ಬೆನ್ನಲ್ಲೇ ಆಡಳಿತದ 3 ವರ್ಷದ ಸಾಧನೆ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Cm siddaramaiah tweets about government developmental work

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆಯೇ ಎಂಬ ಹೊಸ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ.

ಏನಿದೆ ಸಿಎಂ ಟ್ವಿಟ್‌ನಲ್ಲಿ?

ರಾಜ್ಯದ ಜನರ ಆಶೀರ್ವಾದದೊಂದಿಗೆ ಕಾಂಗ್ರೆಸ್ ಸರ್ಕಾರನಾವು ಅಧಿಕಾರಕ್ಕೆ ಬಂದು ಸಾರ್ಥಕ ಮೂರು ವರ್ಷಗಳನ್ನು ಪೂರೈಸಿದೆ.ವರ್ಷಗಳು ಪೂರೈಸಿರುವ ಈ ಯಶಸ್ಸಿನ ಸಂಪೂರ್ಣ ಶ್ರೇಯಸ್ಸನ್ನು ನಾನುಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ನಾಡಿನ ಜನತೆಗೆ ನೀಡಿದ್ದ ಪ್ರತಿಯೊಂದು ಭರವಸೆಗೂ ಬದ್ಧರಾಗಿ ಕೆಲಸ ಮಾಡಿದ್ದೇವೆ. ನಮ್ಮ ಜನಪ್ರಿಯ 5ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೊಳಿಸಿ, ರಾಜ್ಯದ ಪ್ರತಿ ಮನೆಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ತಲುಪಿಸಿದ ಹೆಮ್ಮೆ ನಮ್ಮ ಸರ್ಕಾರಕ್ಕಿದೆ ಎಂದು ಅವರು ಹೆೇಳಿದ್ದಾರೆ.ತಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಅನ್ನಭಾಗ್ಯ’ದ ಯಶಸ್ಸನ್ನು ವಿಶೇಷವಾಗಿ ಉಲ್ಲೇಖಿಸಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಯಾರೂ ಕೂಡ ಹಸಿವಿನಿಂದ ಮಲಗಬಾರದು ಎಂಬ ದೃಢ ಸಂಕಲ್ಪದೊಂದಿಗೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಂದು ಇದು ಕೋಟ್ಯಂತರ ಬಡ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ಒದಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಣೆಗಾಗಿ ನಮ್ಮ ಸರ್ಕಾರ ಇದುವರೆಗೆ ಬರೋಬ್ಬರಿ 18,897 ಕೋಟಿ ರೂಪಾಯಿಗಳನ್ನು ವ್ಯಯಿಸಿದೆ. ಇದರ ನೇರ ಫಲಾನುಭವಿಗಳಾಗಿರುವ ಸುಮಾರು 426 ಕೋಟಿ ಪಡಿತರದಾರರು ಇಂದು ಮೂರು ಹೊತ್ತು ನೆಮ್ಮದಿಯ ಊಟ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಂಕಿ-ಅಂಶಗಳ ಸಮೇತ ವಿವರಿಸಿದ್ದಾರೆ.

ಇದೇ ವೇಳೆ, ಇಂದು ಬೆಳಗ್ಗೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತದ ಪ್ರಥಮ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮದವರು ಕೇಳಿದ ರಾಜೀನಾಮೆ ಕುರಿತ ನೇರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ನನ್ನ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ನಾನು ಏನೇ ಇದ್ದರೂ ನಾಳೆ ಮಾಧ್ಯಮಗಳ ಮುಂದೆ ಸವಿಸ್ತಾರವಾಗಿ ಮಾತನಾಡುತ್ತೇನೆ” ಎಂದು ಹೇಳುವ ಮೂಲಕ ಕುತೂಹಲವನ್ನು ಮತ್ತಷ್ಟು ಕಾಯ್ದಿರಿಸಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣ ಹಿಂಪಡೆಯುವ ನಿರ್ಧಾರ ತಕ್ಷಣ ರದ್ದುಗೊಳಿಸಲಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹ

Leave a Reply

Your email address will not be published. Required fields are marked *