CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

chikkamagaluru datta jayanthi sankeerthana yatre

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು

ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು.

3 ದಿನಗಳ ಕಾಲ ವಿಶೇಷ ಕಾರ್ಯಕ್ರಮ

ಈ ಸಮಯದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿದ್ದು, ದತ್ತ ಪೀಠ, ಬಾಬಾ ಬುಡನ್ ದರ್ಗಾ ಬೇರೆ ಬೇರೆ ಎಂದು ಕಂದಾಯ ಇಲಾಖೆ ದಾಖಲೆಗಳು ಸ್ಪಷ್ಟಪಡಿಸಿದ್ದು, ಅದೇ ರೀತಿ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಹಾಗೆಯೇ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ವೀಣಾಶೆಟ್ಟಿ, ದತ್ತ ಜಯಂತಿ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್‌ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌, ಸಿಎಂ ಪೋಸ್ಟ್‌ ಸೇಫ್‌?

Leave a Reply

Your email address will not be published. Required fields are marked *