ಮಂಡ್ಯ: ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ.
ಒಂದು ವರ್ಷದಿಂದ ಬಂದಿರಲಿಲ್ಲ ವೇತನ
ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಉಚಿತ ಶಿಕ್ಷಣಕ್ಕೆ ಮನವಿ
ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ಒಂದನೇ ತರಗತಿಯಿಂದ ಪಿಯುಸಿವರೆಗೆ ಉಚಿತವಾಗಿ ಶಿಕ್ಷಣ ನೀಡುವುದರಿಂದ ಮಂಡ್ಯ ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಮೈಶುಗರ್ ಪ್ರೌಢಶಾಲೆಯ ನೆರವಿಗೆ ಧಾವಿಸುವಂತೆ ಆದಿಚುಂಚನಗಿರಿ ಮಠಾಧ್ಯಕ್ಷಕರಿಗೆ ಮನವಿ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜೊತೆಗೆ ತಾವು ಕೂಡ ಬೆಂಬಲವಾಗಿ ನಿಲ್ಲುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ
