ಬೆಂಗಳೂರು: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ರಾಜ್ಯದ ಸಂಸದರು ಧ್ವನಿ ಎತ್ತಬೇಕು
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಅನ್ಯಾಯ ಮಾಡುತ್ತಿದೆ ಎಂದ ದಿನೇಶ್ ಗುಂಡೂರಾವ್
ಕಬ್ಬು, ಮೆಕ್ಕೆಜೋಳಕ್ಕೆ ಕೇಂದ್ರ ಬೆಂಬಲ ಬೆಲೆ ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತ ಬಂದಿದೆ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಮುಂದುವರೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಮೈಶುಗರ್ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್ ಕೊಟ್ಟ ಎಚ್‌ಡಿ ಕುಮಾರಸ್ವಾಮಿ
