TOP NEWS

Road Mishap: ಹಿಮಾಚಲ ಪ್ರದೇಶದಲ್ಲಿ ರಸ್ತೆ ಅಪಘಾತ: ಖಾಸಗಿ ಬಸ್ ಉರುಳಿ ಬಿದ್ದು 8 ಮಂದಿ ದುರ್ಮರಣ, 10 ಜನರಿಗೆ ಗಂಭೀರ ಗಾಯ!

Himachal Pradesh Road Mishap 8 Killed 10 Critically Injured as Private Bus Flips Over

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ (Road Mishap) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, 10 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಮಗುಚಿ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.

ಒಟ್ಟು 18 ಜನರಿದ್ದ ಬಸ್

ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ‘ಶರ್ಮಾ ಬಸ್ ಸರ್ವಿಸ್’ಗೆ ಸೇರಿದ ಬಸ್, ಬೆಳಿಗ್ಗೆ ಸುಮಾರು 6:30ಕ್ಕೆ ಹೊರಟಿತ್ತು. ಸುಮಾರು ಮೂರು ಕಿಲೋಮೀಟರ್ ಸಾಗುತ್ತಿದ್ದಂತೆ ಬೈರಾಗಢ-ತಿಸಾ ರಸ್ತೆಯ ಚಲುಂಜ್ ಮೋಡ್ ಬಳಿ ಈ ಅಪಘಾತ ನಡೆದಿದೆ. ಘಟನೆಯ ಸಮಯದಲ್ಲಿ ಬಸ್ಸಿನಲ್ಲಿ ಒಟ್ಟು 18 ಜನರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಮಗುಚಿ ಕೆಳಗಿನ ರಸ್ತೆಗೆ ಬಿದ್ದಿದ್ದರಿಂದ ಹಲವು ಪ್ರಯಾಣಿಕರು ನಜ್ಜುಗುಜ್ಜಾದ ಬಸ್ಸಿನಡಿ ಸಿಲುಕಿಕೊಂಡಿದ್ದರು.

10 ಜನರನ್ನ ರಕ್ಷಿಸಿದ ರಕ್ಷಣಾ ಸಿಬ್ಬಂದಿ

ಪ್ರಯಾಣಿಕರ ಚೀರಾಟ ಕೇಳಿದ ಸ್ಥಳೀಯರು ತಕ್ಷಣವೇ ನೆರವಿಗೆ ದಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಎನ್‌ಡಿಆರ್‌ಎಫ್, ಪೊಲೀಸ್, ಹೋಂ ಗಾರ್ಡ್ಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ಬಸ್ಸಿನ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಾಯಗೊಂಡ 10 ಜನರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಂಬಾದ ಪಂಡಿತ್ ಜವಾಹರಲಾಲ್ ನೆಹರೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಸಂಭವಿಸಿದ ಈ ಪ್ರದೇಶವು ಚುರಾ ಕಣಿವೆಯ ಕಡಿದಾದ ಮತ್ತು ಕಿರಿದಾದ ರಸ್ತೆಗಳಿಗೆ ಹೆಸರುವಾಸಿಯಾಗಿದೆ. ಪ್ರಸ್ತುತ ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:  15 ವರ್ಷದ ಬಾಲಕಿ ಮೇಲೆ ಕಾಮುಕರ ಅಟ್ಟಹಾಸ

Leave a Reply

Your email address will not be published. Required fields are marked *