BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ

bjp mla BY Vijayendra taunts cm siddaramaiah

ಬೆಳಗಾವಿ‌: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ.

ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ

ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ವಿಜಯೇಂದ್ರ ಅವರು ಮೊದಲು ತಮ್ಮ ಪಕ್ಷದೊಳಗಿನ ಸಮಸ್ಯೆಗಳನ್ನು ಬಗೆಹರಿಸಲಿ ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಸಹ ಈ ವಿಚಾರವಾಗಿ ಮಾತನಾಡಿದ್ದು, ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

Leave a Reply

Your email address will not be published. Required fields are marked *