Crime: ಪ್ರೇಮವಿವಾಹವಾಗಿದ್ದ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ

Crime in Chitradurga Newlywed Found Dead in Well Family Alleges Murder

ಚಿತ್ರದುರ್ಗ: ಪ್ರೇಮ ವಿವಾಹವಾಗಿದ್ದ ನವವಿವಾಹಿತೆಯೊಬ್ಬಳು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ (Crime) ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ.

ಅನುಮಾನ ಸೃಷ್ಟಿ ಮಾಡಿದ ಸಾವು

ಕಾರಿಪಾಲಯ್ಯನಹಟ್ಟಿ ಮೂಲದ 21 ವರ್ಷದ ಸುಮಲತಾ ಮೃತಪಟ್ಟ ದುರ್ದೈವಿ ನವವಿವಾಹಿತೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಆಕೆಯ ಪತಿ ಗುಂಡಯ್ಯನಹಟ್ಟಿ ಮೂಲದ ಗಜೇಂದ್ರ ಹಾಗೂ ಆತನ ಕಡೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ಸುಮಲತಾ ಅವರು ಕಳೆದ ಆಗಸ್ಟ್ 13 ರಂದು ತಮ್ಮ ಮನೆಯನ್ನು ತೊರೆದು ಗಜೇಂದ್ರ ಎಂಬಾತನೊಂದಿಗೆ ತೆರಳಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ತದನಂತರ ಪ್ರೇಮ ವಿವಾಹ ಕೂಡ ಆಗಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ, ಅಂದರೆ ಭಾನುವಾರ ಸಂಜೆ ಮಹಾದೇವಪುರ ಗ್ರಾಮದ ಬಾವಿಯೊಂದರಲ್ಲಿ ಸುಮಲತಾ ಅವರ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಲೆ ಆರೋಪ ಮಾಡಿದ ಮೃತಳ ಸಂಬಂಧಿಕರು

ಸುಮಲತಾ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಇದು ಆತ್ಮಹತ್ಯೆಯಲ್ಲ, ಗಜೇಂದ್ರ ಮತ್ತು ಆತನ ಕಡೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತರ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿರುವ ನಾಯಕನಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಬೆಂಗಳೂರು: ಟ್ರಾಫಿಕ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ದರ್ಪ ಮೆರೆದಿದ್ದ ಜೆಡಿಎಸ್ ನಾಯಕ ಗೊಟ್ಟಿಗೆರೆ ಮಂಜುನಾಥ್ ಕೊನೆಗೂ ಬಂಧನ!

ಬೆಂಗಳೂರು: ಪ್ರೇಮವಿವಾಹವಾಗಿದ್ದ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪಕರ್ತವ್ಯನಿರತ ಸಂಚಾರ ಪೊಲೀಸ್ ಸಿಬ್ಬಂದಿಯ ಮೇಲೆ ರಾಜಕೀಯ ಅಧಿಕಾರದ ಮದ ತೋರಿಸಿ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅವರನ್ನು ಹುಳಿಮಾವು ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಈ ಘಟನೆ ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್ ಬಳಿ ನಡೆದಿತ್ತು. ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಅರುಣ್ ಅವರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಸಂಚಾರ ನಿಯಮ ಉಲ್ಲಂಘಿಸಿದ ಕಾರೊಂದನ್ನು ತಡೆದು ನಿಲ್ಲಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಗೊಟ್ಟಿಗೆರೆ ಮಂಜುನಾಥ್, “ನನ್ನ ವಾಹನವನ್ನೇ ತಡೆಯುವಷ್ಟು ಧೈರ್ಯವೇ?” ಎಂದು ಏಕವಚನದಲ್ಲೇ ನಿಂದಿಸಿ, ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಸಂಬಂಧ ಸಂತ್ರಸ್ತ ಹೆಡ್ ಕಾನ್‌ಸ್ಟೇಬಲ್ ನೀಡಿದ ದೂರಿನ ಆಧಾರದ ಮೇಲೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ನಡೆಸಿದ ಪ್ರಕರಣ (FIR) ದಾಖಲಾಗಿತ್ತು. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬಂಧನದ ಭಯದಿಂದ ಗೊಟ್ಟಿಗೆರೆ ಮಂಜುನಾಥ್ ತಲೆಮರೆಸಿಕೊಂಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಳಿಮಾವು ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದರು. ಕೊನೆಗೆ ನಗರದ ಖಾಸಗಿ ಹೋಟೆಲೊಂದರಲ್ಲಿ ಅಡಗಿದ್ದ ಮಂಜುನಾಥ್ ಅವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಸ್ತುತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಕಾನೂನು ಪ್ರಕ್ರಿಯೆ ಮುಂದುವರಿದಿದೆ.

ಇದನ್ನೂ ಓದಿ: ವೀಡಿಯೋ ಕಾನ್ಫರೆನ್ಸ್‌ನಲ್ಲೇ ಸಿಕ್ಕಿಬಿದ್ದ ಪವಿತ್ರಾಗೌಡ ಸುಳ್ಳು

Leave a Reply

Your email address will not be published. Required fields are marked *