ಮುಂಬೈ: ಮಹಾರಾಷ್ಟ್ರದ ಪುರಸಭೆ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದ್ದು, ಈ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (Devendra Fadnavis) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರದ ಅಂಬರ್ನಾಥ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಏಕೆ ಮತ್ತು ಹೇಗೆ ಮೈತ್ರಿ ಮಾಡಿಕೊಂಡವು ಎನ್ನುವ ವಿಚಾರವನ್ನ ತಿಳಿಸಿದ್ದಾರೆ.
ಅನಿರೀಕ್ಷಿತ ಮೈತ್ರಿ ಬಗ್ಗೆ ಫಡ್ನವೀಸ್ ಹೇಳಿದ್ದೇನು?
ಅಕೋಟ್‌ನಲ್ಲಿ ಬಿಜೆಪಿ-ಎಐಎಂಐಎಂ ಮೈತ್ರಿಕೂಟದ ಬಗ್ಗೆಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಅಕೋಟ್ ಬಹಳ ಚಿಕ್ಕ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ ಸುಮಾರು 17,000 ಮತದಾರರು ಇದ್ದಾರೆ. ನಮಗೆ ಕೆಳ ಹಂತಗಳಲ್ಲಿ ಬಹುಮತ ಇರಲಿಲ್ಲ. ಹಾಗಾಗಿ ನಾವು ಅಜಿತ್ ಬಣದ NCP ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. NCP ಈಗಾಗಲೇ MIM ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ನಮಗೆ ತಿಳಿದಿರಲಿಲ್ಲ. ನಾವು NCP ಜೊತೆ ಮೈತ್ರಿ ಮಾಡಿಕೊಂಡ ಕಾರಣದಿಂದ, MIM ಸದಸ್ಯರು ತಾಂತ್ರಿಕವಾಗಿ ನಮ್ಮ ಜೊತೆ ಮೈತ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ. ಆದರೆ ನಮಗೆ ವಿಚಾರ ತಿಳಿದ ತಕ್ಷಣ ನಾವು ಆ ಮೈತ್ರಿಕೂಟದಿಂದ ಹೊರಗೆ ಬಂದಿದ್ದು, ನಮ್ಮ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಸುಳ್ಳು ಕಥೆ ಕಟ್ಟಿದೆ
ಕಾಂಗ್ರೆಸ್ ಜೊತೆಗಿನ ಮೈತ್ರಿಯ ಬಗ್ಗೆ ಸಹ ಅವರು ಪ್ರತಿಕ್ರಿಯೆ ನೀಡಿದ್ದು, ಅದು ಒಂದು ಸುಳ್ಳು ಕಥೆ. ನಮಗೆ ಅಂಬರ್ನಾಥ್ ಪ್ರದೇಶದಲ್ಲಿ ಜನಾದೇಶ ಹೆಚ್ಚಿರಲಿಲ್ಲ. ಹಾಗಾಗಿ ಬಿಜೆಪಿ ಮತ್ತು ಶಿಂಧೆ ಅವರ ಶಿವಸೇನೆ ನಮ್ಮ ಪಾಲುದಾರರಾಗಿರುವುದರಿಂದ ಅಂಬರ್ನಾಥ್ ನಲ್ಲಿ ಮೈತ್ರಿ ಮಾಡಿಕೊಳ್ಳಬೇಕು ಎಂದು ನಾವು ಅಂದುಕೊಂಡಿದ್ದೆವು. ಆದರೆ ಆ ಪ್ರದೇಶದಲ್ಲಿ ಶಿವಸೇನೆ ಹಾಗೂ ಬಿಜೆಪಿ ನಾಯಕರ ನಡುವಿನ ಸಂಬಂಧ ಸರಿ ಇಲ್ಲ. ಈ ನಡುವೆ ಕೆಲ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರಲು ನಿರ್ಧಾರ ಮಾಡಿದ್ದರು. ಇದನ್ನ ತಿಳಿದ ಕಾಂಗ್ರೆಸ್ ಬಿಜೆಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿಕೊಂಡು ಕಾಂಗ್ರೆಸ್ ಗದ್ದಲ ಸೃಷ್ಟಿಸಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ
