Mysuru: ಮಳೆಯಿಂದ ಚಾಮುಂಡಿ ಬೆಟ್ಟದ ನಂದಿ ರಸ್ತೆಯಲ್ಲಿ ಬಿರುಕು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಮಹದೇವಪ್ಪ

mysuru minister mahadevappa visit to chamundi hills nandi road

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ರಸ್ತೆ ಹಾಳಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು (Mysuru) ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮಳೆಯಿಂದ ರಸ್ತೆಯಲ್ಲಿ ದೊಡ್ಡ ಬಿರುಕು

ಮೈಸೂರಿನಲ್ಲಿ ಸುರಿದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ಮಾರ್ಗದ ರಸ್ತೆಯಲ್ಲಿ ದೊಡ್ಡ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.

ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು

ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ತ್ವರಿತವಾಗಿ ಕಾಮಕಾರಿಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.  ನಂದಿ ವಿಗ್ರಹಕ್ಕೆ ತೆರಳುವ ಮಾರ್ಗವು ಕಿರಿದಾಗಿದ್ದು, ವಾಹನ ಚಲಾಯಿಸುವುದು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗುಣಮಟ್ಟದ ರಸ್ತೆಯನ್ನು ಮರುನಿರ್ಮಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ಇದನ್ನೂ ಓದಿ: ಅಕ್ಕ ಪಡೆಗೆ ಸಚಿವ ವೆಂಕಟೇಶ್‌ ಚಾಲನೆ

Leave a Reply

Your email address will not be published. Required fields are marked *