Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್

Supreme Court notice to state and central government

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ನೋಟಿಸ್‌ನಲ್ಲಿ ಏನಿದೆ?

ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ ಸರ್ಕಾರಿ ಹುದ್ದೆಯನ್ನು ಪಡೆದಿರುವ ಪ್ರಕರಣಗಳಲ್ಲಿ ಅಂತಹ ವ್ಯಕ್ತಿಯ ಮಕ್ಕಳು ಮೀಸಲಾತಿಯ ಸೌಲಭ್ಯಗಳನ್ನು ಪಡೆಯಲು ಅನುಮತಿ ನೀಡಬಾರದು ಎಂದು ವಾದಿಸಿದರು. ಅರ್ಜಿಯಲ್ಲಿ ಕೆನೆಪದರವನ್ನು ಹೊರಗಿಡದಿರುವುದು ಗಂಭೀರ ರಾಷ್ಟ್ರೀಯ, ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ಬೀರುತ್ತದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

Leave a Reply

Your email address will not be published. Required fields are marked *