TOP NEWS

Protest :ತುಮರಿ ಭಾಗದಲ್ಲಿ ಹೆಚ್ಚುತ್ತಿರುವ ದುಷ್ಕೃತ್ಯಗಳು: ಸ್ಥಳೀಯರಿಂದ ಪ್ರತಿಭಟನೆ

ಸಾಗರ (ತುಮರಿ): ಕಳೆದ ಎರಡು ತಿಂಗಳುಗಳಿಂದ ತುಮರಿ ಸುತ್ತಮುತ್ತಲಿನ ಭಾಗಗಳಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ, ಪೊಲೀಸ್ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ(Protest) ನಡೆಸಿದರು.

ಕಳೆದ ಎರಡು ತಿಂಗಳ ಅವಧಿಯಲ್ಲಿ ಈ ಭಾಗದಲ್ಲಿ ನಡೆದ ಹತ್ತನೇ ಪ್ರಕರಣ ಇದಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ವಿಶೇಷವಾಗಿ ಶಾಲೆಗಳು, ಕೃಷಿ ಇಲಾಖೆಯ ಕಚೇರಿಗಳು ಹಾಗೂ ಸ್ಥಳೀಯ ಶ್ರದ್ಧಾ ಕೇಂದ್ರಗಳನ್ನೇ ಗುರಿಯಾಗಿಸಿಕೊಂಡು ಈ ಕೃತ್ಯಗಳನ್ನು ಎಸಗಲಾಗುತ್ತಿದೆ. ಇಷ್ಟೆಲ್ಲಾ ಘಟನೆಗಳು ನಡೆದಿದ್ದರೂ, ಇದುವರೆಗೂ ಒಬ್ಬನೇ ಒಬ್ಬ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಅಥವಾ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ಪೊಲೀಸರು ಯಾವುದೇ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿದೆ ಎಂದು ದೂರಿದ ಪ್ರತಿಭಟನಾಕಾರರು, ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಶ್ರದ್ಧಾ ಕೇಂದ್ರಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *