ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆ DGP ರಾಮಚಂದ್ರ ರಾವ್ (Viral Video) ರಾಸಲೀಲೆ ಪ್ರಕರಣ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
ಪತ್ರ ಬರೆದ ಸ್ನೇಹಮಯಿ ಕೃಷ್ಣ
ಈ ವಿಚಾರವಾಗಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸ್ನೇಹಮಯಿ ಕೃಷ್ಣ ಅವರು ಪತ್ರ ಬರೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ಮಹಿಳೆಯರ ಸುರಕ್ಷತೆಗೆ ಕ್ಯಾಮೆರಾ ಮುಖ್ಯ
ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ಸಾರ್ವಜನಿಕ ಮಹಿಳೆಯರ ಜೊತೆ ಅಸಭ್ಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಸರ್ಕಾರಿ ಕಚೇರಿ, ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಕ್ಯಾಮೆರಾ ಅಳವಡಿಸಿ. ಈ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯ ತಪ್ಪಿಸಲು ಸಾಧ್ಯ. ಮುಖ್ಯವಾಗಿ ಕೆಲವು ಮಹಿಳಾ ಸಿಬ್ಬಂದಿ ದೌರ್ಜನ್ಯವಾದರೂ ಸಹ ಮಾನ ಮರ್ಯಾದೆಗೆ ಹೆದರಿ ದೂರು ನೀಡುವುದಿಲ್ಲ. ಆದ್ದರಿಂದ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
ಇದನ್ನೂ ಓದಿ: 10 ದಿನ ರಜೆ ಹಾಕಿ ರಹಸ್ಯ ಸ್ಥಳಕ್ಕೆ ತೆರಳಿದ ರಾಮಚಂದ್ರರಾವ್
