ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುತ್ತಿಗೆಗೆ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದ ಭಾರತ (India)ss ತಂಡದ ನಾಯಕ ಶುಭಮನ್ ಗಿಲ್ (Shubman Gill) ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈಡನ್ ಗಾರ್ಡನ್ಸ್ (Eden Gardens) ಮೈದಾನದಲ್ಲಿ ಭಾರತ ತಂಡ 30 ರನ್ಗಳ ಸೋಲು ಅನುಭವಿಸಿತ್ತು. ಇದರೊಂದಿಗೆ ಭಾರತ ಎರಡು ಪಂದ್ಯಗಳ ಸರಣಿಯಲ್ಲಿ 1-0 ಹಿನ್ನಡೆ ಕಂಡಿದೆ. ಕೋಲ್ಕತ್ತಾ ಟೆಸ್ಟ್ ಪಂದ್ಯದ ಬಳಿಕ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ವುಡ್ಲ್ಯಾಂಡ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಗಿಲ್ ಅವರನ್ನು ಭೇಟಿ ಮಾಡಲು ತೆರಳಿದ್ದರು.

