Republic Day: 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾರತ, ದೇಶದ ಜನರಿಗೆ ಮೋದಿ ಶುಭಾಶಯ

77 Republic Day of india modi sends wishes to people

ನವದೆಹಲಿ: ಭಾರತ ಇಂದು ತನ್ನ 77 ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಬಾರಿ ಮುಖ್ಯ ಅತಿಥಿಗಳು ಯಾರು?

ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ದೇಶದ ಜನರಿಗೆ ಶುಭ ಕೋರಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಯದಲ್ಲಿ ದೇಶದ ಜನರಿಗೆ ಶುಭ ಕೋರಿದ್ದು, ಭಾರತದ ಗೌರವ, ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ಭವ್ಯ ರಾಷ್ಟ್ರೀಯ ಹಬ್ಬವು ನಿಮ್ಮ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಹರಸಿದ್ದಾರೆ.

ಇನ್ನು ಇಂದು ಬೆಳಿಗ್ಗೆ 9:30 ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಲಿದ್ದಾರೆ. ನಂತರ ವೇದಿಕೆಯಲ್ಲಿ ಗಣ್ಯರೊಂದಿಗೆ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಸಂಪ್ರದಾಯದ ಪ್ರಕಾರ, ರಾಷ್ಟ್ರಧ್ವಜವನ್ನು ಹಾರಿಸಲಾಗುವುದು, ಅದರ ನಂತರ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಫಿರಂಗಿ ವ್ಯವಸ್ಥೆಯಾದ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳನ್ನು ಬಳಸಿ 21-ಗನ್ ಸೆಲ್ಯೂಟ್ ಜೊತೆಗೆ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. 21-ಗನ್ ಸೆಲ್ಯೂಟ್ ಅನ್ನು 172 ಫೀಲ್ಡ್ ರೆಜಿಮೆಂಟ್‌ನ 1721 ಸೆರಿಮೋನಿಯಲ್ ಬ್ಯಾಟರಿಯಿಂದ ಪ್ರಸ್ತುತಪಡಿಸಲಾಗುತ್ತದೆ.

ಇದನ್ನೂ ಓದಿ: ಕೇರಳದ ಜನರಿಗೆ ಕೇಂದ್ರದ ಮೇಲೆ ನಂಬಿಕೆ ಇದೆ: ನರೇಂದ್ರ ಮೋದಿ

Leave a Reply

Your email address will not be published. Required fields are marked *