Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Weather Report rain expected in bengaluru and other districts

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ.

ಚಳಿ ಹೆಚ್ಚುವ ಸಾಧ್ಯತೆ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಇಂದು ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ. ಆದರೆ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು  ಇಲಾಖೆ ಮುನ್ಸೂಚನೆ ನೀಡಿದೆ.

ಮುಖ್ಯವಾಗಿ ಇಲಾಖೆಯ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅನೇಕ ಪ್ರದೇಶಗಳಲ್ಲಿ ಮಂಜು ಬೀಳುವ ಸಾಧ್ಯತೆ ಸಹ ದಟ್ಟವಾಗಿದೆ.

ಈ ಜಿಲ್ಲೆಗಳಲ್ಲಿ ಒಂದು ವಾರ ಒಣ ಹವೆ

ಹಾಗೆಯೇ, ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ,  ಕೋಲಾರ, ಮಂಡ್ಯ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದು ವಾರ ಒಣ ಹವೆ ಇರಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ, ಕಾಂಗ್ರೆಸ್‌ ಮುಖಂಡನ ಮೇಲೆ ದೂರು ದಾಖಲು

Leave a Reply

Your email address will not be published. Required fields are marked *